ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1650 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮಹತ್ವದ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಉಳಿದಿರುವ 1,650 ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಮೀಸಲಾತಿ ಅನ್ವಯ ಹುದ್ದೆಗಳನ್ನು ಮರು ಹಂಚಿಕೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.
ಕಲ್ಯಾಣ ಕರ್ನಾಟಕದ 179, ಸಾಮಾನ್ಯ ವೃಂದದ ಜಿಲ್ಲೆಗಳಿಗೆ 1,421 ಹುದ್ದೆ ಹಾಗೂ ಕ್ರೀಡಾ ವಿಭಾಗಕ್ಕೆ 50 ಹುದ್ದೆಗಳನ್ನು ಮೀಸಲಿಡಲಾಗಿದೆ. ಆಡಳಿತಾತ್ಮಕ ಕಾರಣಗಳಿಗಾಗಿ ಈ ಹಿಂದೆ ನಿಗದಿಯಾಗಿದ್ದ ಹುದ್ದೆಗಳನ್ನು ಈಗ ಮರು ಹಂಚಿಕೆ ಮಾಡಲಾಗಿದೆ.
ವಿವಿಧ ಘಟಕಗಳಿಗೆ ಹುದ್ದೆಗಳನ್ನು ವರ್ಗೀಕರಣಗೊಳಿಸಿ ನೇರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುವಂತೆ ಆಯಾ ಘಟಕಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಈ ಮೊದಲ ಹಂಚಿಕೆ ಮಾಡಲಾಗಿರುವ ವೇಳೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ 275, ಸಾಮಾನ್ಯ ವೃಂದದ ಜಿಲ್ಲೆಗಳಿಗೆ 1,375 ಸೇರಿ ಒಟ್ಟು 1,650 ಹುದ್ದೆಗಳನ್ನು ಹಂಚಿಕೆ ಮಾಡಲಾಗಿತ್ತು.








