ಬೆಂಗಳೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ಏಪ್ರಿಲ್ 16 ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ ಮತ್ತು ಯುವತಿಯರು ಭಾಗವಹಿಸಬಹುದು.
ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗಾಗಿ ಕರ್ನಾಟಕ ಸರ್ಕಾರದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಭಾಗೀಯ ಮಟ್ಟದ ಉದ್ಯೋಗಮೇಳವನ್ನು 16 ಏಪ್ರಿಲ್ 2025 ರಂದು ಕಲಬುರಗಿಯ ಕೆ.ಸಿ.ಟಿ. ಕಾಲೇಜ್ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು https://udyogamela.skillconnect.kaushalkar.com/ext/form/54/1/apply ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.
ಉದ್ಯೋಗ ಮೇಳದಲ್ಲಿ 250 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಲಿಂಕ್: https://udyogamela.skillconnect.kaushalkar.com/ ಗೆ ಭೇಟಿ ನೋಂದಾಯಿಸಿಕೊಳ್ಳಬಹುದಾಗಿದೆ ಅಥವಾ ಕ್ಯೂಆರ್ ಕೋಡ್ ನ್ನು ಸ್ಕ್ಯಾನ್ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಈ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 08022075030 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.