ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-144 ರನ್ವಯ ರಾಜ್ಯದಲ್ಲಿ ಆರೋಗ್ಯ ಕವಚ ಸೇವೆಯನ್ನು ಬಲಪಡಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು 3691 ಹುದ್ದೆಗಳನ್ನು ಸೃಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇಲೆ ಓದಲಾದ ಕ್ರಮಾಂಕ (1) ರ ಆಯವ್ಯಯ ಭಾಷಣೆ ಕಂಡಿಕೆಯಲ್ಲಿ ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವ ಮೂಲಕ ‘ಆರೋಗ್ಯ ಕವಚ’ ಸೇವೆಯನ್ನು ಬಲಪಡಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (2) ರ ಏಕ-ಕಡತದಲ್ಲಿ 108 ಆರೋಗ್ಯ ಕವಚ ಹಾಗೂ 104- ಆರೋಗ್ಯ ಸಹಾಯವಾಣಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ನಿರ್ವಹಿಸಲು ಈ ಕೆಳಕಂಡ ಹುದ್ದೆಗಳ ಸೃಜನೆಗೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ಮೇಲೆ ಓದಲಾದ ಕ್ರಮಾಂಕ (3) ರ ಆದೇಶದಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣೆ ಕಂಡಿಕೆ – 144 ರ ಘೋಷಣೆಯನ್ವಯ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸಲು 108 ಆರೋಗ್ಯ ಕವಚ ಹಾಗೂ 104- ಆರೋಗ್ಯ ಸಹಾಯವಾಣಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ನಿರ್ವಹಿಸಲು 3691 ಹುದ್ದೆಗಳನ್ನು ಸೃಜಿಸಲಾಗಿರುತ್ತದೆ.
108 ಆರೋಗ್ಯ ಕವಚ ಹಾಗೂ 104- ಆರೋಗ್ಯ ಸಹಾಯವಾಣಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ನಿರ್ವಹಿಸಲು ಉಳಿದಂತೆ 4 ಆಡಳಿತಾತ್ಮಕ ಹುದ್ದೆಗಳನ್ನು ಸೃಜಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿನ ಆಯವ್ಯಯ ಭಾಷಣೆ ಕಂಡಿಕೆ -144 ರ ಘೋಷಣೆಯನ್ವಯ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸಲು 108 ಆರೋಗ್ಯ ಕವಚ ಹಾಗೂ 104- ಆರೋಗ್ಯ ಸಹಾಯವಾಣಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ನಿರ್ವಹಿಸಲು ಈ ಕೆಳಕಂಡ 4 ಆಡಳಿತಾತ್ಮಕ ಹುದ್ದೆಗಳನ್ನು ಸೃಜಿಸಲಾಗಿದೆ
ಆಡಳಿತಾತ್ಮಕ ಹುದ್ದೆಗಳನ್ನು ಸಂಬಂಧಪಟ್ಟ ಇಲಾಖೆಗಳಿಂದ ನಿಯೋಜನೆ ಮೇರೆಗೆ (ಸಿಆಸುಇ, ಆರ್ಥಿಕ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಿಂದ) ಭರ್ತಿ ಮಾಡಿಕೊಳ್ಳತಕ್ಕದ್ದು. ಈ ಆದೇಶವನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ 438 ವೆಚ್ಚ-5/2025, ದಿನಾಂಕ: 11.09.2025 ರ ಸಹಮತಿಯ ಮೇರೆಗೆ ಹೊರಡಿಸಲಾಗಿರುತ್ತದೆ.










