ಬೆಂಗಳೂರು: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 50 ಸಹಾಯಕ ಇಂಜಿನಿಯರ್, 14 ಪ್ರಥಮ ವಿಭಾಗದ ಖಾತೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿತ್ತು.
ಇದೀಗ ಅರ್ಜಿ ಸಲ್ಲಿಕೆ ಕೊನೇ ದಿನವನ್ನು ಮಾ.10ರಿಂದ ಮಾ.21ರವರೆಗೆ ವಿಸ್ತರಿಸಿದೆ. ಸಿವಿಲ್ನಲ್ಲಿ ಬಿಇ/ಬಿಟೆಕ್, ಬಿಕಾಮ್/ತತ್ಸಮಾನ ಪದವಿ ಪೂರ್ಣಗೊಳಿಸಿರುವವರು, ಕನಿಷ್ಠ 18 ಗರಿಷ್ಠ 40 ವರ್ಷದೊಳಗಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಯೋಸಡಿಲಿಕೆ ಅನ್ವಯವಾಗಲಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಅನುಗುಣವಾಗಿ 27,650ರೂ. – 83,900ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ. ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು kuwsdb.karnataka.gov.inಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.