Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

03/05/2026 5:26 PM

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ : ಕರ್ನಾಟಕ ಸರ್ಕಾರದ 8 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ‘708’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.25 ಲಾಸ್ಟ್ ಡೇಟ್.!
KARNATAKA

ಉದ್ಯೋಗವಾರ್ತೆ : ಕರ್ನಾಟಕ ಸರ್ಕಾರದ 8 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ‘708’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.25 ಲಾಸ್ಟ್ ಡೇಟ್.!

By kannadanewsnow5722/11/2025 6:21 AM

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿವಿ ಹೀಗೆ 8 ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 25ರವರೆಗೆ ವಿಸ್ತರಣೆ ಮಾಡಲಾಗಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಪ್ರಾಧಿಕಾರದಿಂದ ದಿನಾಂಕ 15.11.2025 ರಂದು ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕದ ವಿವಿಧ ಸರ್ಕಾರಿ ಇಲಾಖೆ/ಸಂಸ್ಥೆ/ನಿಗಮದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿಗಳನ್ನು ಆಹ್ವಾನಿಸಿ, ದಿನಾಂಕ 08.10.2025 ಮತ್ತು 31.10.2025 ರಂದು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅಧಿಸೂಚನೆಗಳನ್ನು ಹೊರಡಿಸಲಾಗಿತ್ತು ಮತ್ತು ದಿನಾಂಕ 31.10.2025 ರಂದು ಪ್ರತ್ಯೇಕ ಪ್ರಕಟಣೆ ಹೊರಡಿಸಿ ಅರ್ಜಿ ಸಲ್ಲಿಸಲು ದಿನಾಂಕವನ್ನು 14.11.2025ರ ವರೆಗೆ ಹಾಗೂ ದಿನಾಂಕ 15.11.2025 ರವರೆಗೆ ಶುಲ್ಕ ಪಾವತಿಸುಲು ಅವಕಾಶ ನೀಡಲಾಗಿತ್ತು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿರುವುದರಿಂದ, ಈಗಾಗಲೇ ಅಧಿಸೂಚನೆ ಹೊರಡಿಸಿದ ಇಲಾಖೆ/ಸಂಸ್ಥೆಗಳ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಈ ಕೆಳಗಿನಂತೆ ನಿಗದಿಗೊಳಿಸಲಾಗಿದೆ.

1) ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 25.11.2025

2) ಆನ್ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 26.11.2025

ಸೂಚನೆ: ಅರ್ಹತಾ ನಿಬಂಧನೆಗಳು ಹಾಗೂ ಇತರೆ ವಿವರಗಳಿಗಾಗಿ ದಿನಾಂಕ: 08.10.2025, ದಿನಾಂಕ 31.10.2025 ಮತ್ತು ದಿನಾಂಕ 15.11.2025ರ ವಿವರವಾದ ಅಧಿಸೂಚನೆಗಳನ್ನು ಓದಿಕೊಳ್ಳಲು ಸೂಚಿಸಿದೆ.

ನೇಮಕಾತಿ ಹುದ್ದೆಗಳ ವಿವರ

ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ- 18+07 ಹುದ್ದೆಗಳು

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ – 07+ 14 ಹುದ್ದೆಗಳು

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಬೆಂಗಳೂರು – 40+4 ಹುದ್ದೆಗಳು

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ- 63+253 ಹುದ್ದೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ- 19 ಹುದ್ದೆ

ಕೃಷಿ ಮಾರಾಟ ಇಲಾಖೆ- 180 ಹುದ್ದೆಗಳು

ತಾಂತ್ರಿಕ ಶಿಕ್ಷಣ ಇಲಾಖೆ – 50+43 ಹುದ್ದೆಗಳು

ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗದಲ್ಲಿ – 10 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ

ಪ್ರಥಮ ದರ್ಜೆ ಸಹಾಯಕರಿಗೆ – ಪದವಿ

ದ್ವಿತೀಯ ದರ್ಜೆ ಸಹಾಯಕರಿಗೆ – ದ್ವಿತೀಯ ಪಿಯುಸಿ

ಸಹಾಯಕ ಸಂಚಾರ ನಿರೀಕ್ಷಕರ ಹುದ್ದೆಗೆ- ಕಲಾ, ವಾಣಿಜ್ಯ, ವಿಜ್ಞಾನ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ನಿರ್ವಾಹಕರ ಹುದ್ದೆ – ಪಿಯುಸಿ

ಸಹಾಯಕ ಲೆಕ್ಕಿಗ – ಬಿಕಾಂ

ಅಧಿಕಾರಿ – ಪದವಿ ಜೊತೆಗೆ ಎಂಬಿಎ

ಕಿರಿಯ ಅಧಿಕಾರಿ- ಎಂಎಸ್ಸಿ ಕೆಮಿಸ್ಟ್ರಿ

ಸಹಾಯಕ ಗ್ರಂಥಪಾಲಕರು – ಎಂಎಸ್ಸಿ ಲೈಬ್ರರಿ ಸೈನ್ಸ್

ಗ್ರಂಥಪಾಲಕರು – ಎಂಲಿಬ್

ಜೂನಿಯರ್ ಪ್ರೋಗ್ರಾಮರ್- ಎಲೆಕ್ಟ್ರಾನಿಕ್ಸ್ ಕಂಪ್ಯೂಟರ್ ಸೈನ್ಸ್ ಅಥವಾ ಎಂಸಿಎ

ಸಹಾಯಕ ಇಂಜಿನಿಯರ್- ಸಿವಿಲ್ ಇಂಜಿನಿಯರಿಂಗ್

ಸಹಾಯಕ ಅಭಿಯಂತರರು- ಬಿಇ ಸಿವಿಲ್

ಕಿರಿಯ ಅಭಿಯಂತರರು- ಡಿಪ್ಲೋಮಾ ಸಿವಿಲ್

ಮಾರುಕಟ್ಟೇ ಮೇಲ್ವಿಚಾರಕರು – ಬಿಎಸ್ಸಿ ಅಕ್ರಿಕಲ್ಚರ್ ಮಾರ್ಕೇಟಿಂಗ್.

ವಯೋಮಿತಿ

ಸಾಮಾನ್ಯ ಅಭ್ಯರ್ಥಿಗಳಿಗೆ 38 ವರ್ಷಗಳು

ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷ

ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 43 ವರ್ಷ

ಈ ಮೇಲ್ಕಂಡ 394 ಕೆಇಎ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ, ಇತರೆ ಮಾಹಿತಿಗೆ ಸಂಬಂಧಿಸಿದಂತೆ http://cetonline.karnataka.gov.in/kea/ ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ;

a) OMR ಆಧಾರಿತ ಪರೀಕ್ಷೆಯಾಗಿದ್ದು ಒಂದು ಪ್ರಶ್ನೆಗೆ OMR ನಲ್ಲಿ 05 ವೃತ್ತಗಳಿದ್ದು, ಮೊದಲ 04 ವೃತ್ತಗಳು ಒಂದು ಸರಿಯಾದ ಉತ್ತರವನ್ನು ಶೇಡ್ ಮಾಡಲು ಸಂಬಂಧಿಸಿವೆ. ಅಭ್ಯರ್ಥಿಗೆ ಯಾವುದಾದರೂ ಪ್ರಶ್ನೆಗೆ / ಪ್ರಶ್ನೆಗಳಿಗೆ ಉತ್ತರ ತಿಳಿದಿಲ್ಲದಿದ್ದರೆ ಕಡ್ಡಾಯವಾಗಿ 05 ನೇ ವೃತ್ತವನ್ನು ಕೇಡ್ ಮಾಡಬೇಕು. ಇಲ್ಲದಿದ್ದಲ್ಲಿ 4 ಅಂಕ ಕಡಿತ ಮಾಡಲಾಗುವುದು.

b) ಋಣಾತ್ಮಕ ಮೌಲ್ಯಮಾಪನವಿದ್ದು, ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು (7) ಅಂಕಗಳನ್ನು ಕಡಿತ ಮಾಡಲಾಗುವುದು.

c) ಪರೀಕ್ಷಾ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗುವುದು,

d) ಒಂದೇ ಪಠ್ಯಕ್ರಮವಿರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗಳಿಗೆ ಮೆರಿಟ್ ಪಟ್ಟಿ ನೀಡಲಾಗುವುದು.
ಅರ್ಜಿ ಆಹ್ವಾನಿಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಂಬಂಧ ಪಟ್ಟ ನೇಮಕಾತಿ ಪ್ರಾಧಿಕಾರಗಳಿಗೆ ನೀಡುವ ಜವಾಬ್ದಾರಿ ಮಾತ್ರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ್ದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನೀಡಿರುವ ಮಾಹಿತಿಯನುಸಾರ ದಾಖಲೆ ಪರಿಶೀಲಿಸಿ ನಿಯಮಾನುಸಾರ ನೇಮಕಾತಿ ಆದೇಶ ನೀಡುವುದು ಸಂಬಂಧ ಪಟ್ಟ ನೇಮಕಾತಿ ಪ್ರಾಧಿಕಾರದ ಜವಾಬ್ದಾರಿಯಾಗಿರುತ್ತದೆ.

ನೇಮಕಾತಿ ಪ್ರಕ್ರಿಯೆ ಕುರಿತು ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸುವುದಿಲ್ಲ, ಅಭ್ಯರ್ಥಿಗಳು ಆಗಿಂದಾಗ್ಗೆ ಪ್ರಾಧಿಕಾರದ ವೆಬ್ಸೈಟ್ https://cetonline.karnataka.gov.in/keaಗೆ ಭೇಟಿ ನೀಡುತ್ತಿರಲು ಸೂಚಿಸಿದೆ.

#KEARecruitment: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೂಡ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವ ಕಾರಣ ಈ ಹಿಂದಿನ ನೇಮಕಾತಿ ಅಧಿಸೂಚನೆಗಳ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆ ದಿನಾಂಕವನ್ನು ನ.25ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ನ.26 ಕೊನೆ ದಿನ.

-… pic.twitter.com/kGV170XAoY

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) November 16, 2025

Job News: Last date to apply for '708' vacant posts in 8 different departments of Karnataka Government is 25th November!
Share. Facebook Twitter LinkedIn WhatsApp Email

Related Posts

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

03/05/2026 5:26 PM1 Min Read

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM1 Min Read

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM1 Min Read
Recent News

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

03/05/2026 5:26 PM

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM
State News
KARNATAKA

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

By kannadanewsnow0903/05/2026 5:26 PM KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಚಾರದಲ್ಲಿ ಪೈಲಟ್ ಮಾಡಿದ ಸಣ್ಣ…

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.