ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ.
ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ದಿನಾಂಕ:20-09-2024ರ ಅಧಿಸೂಚನೆಯಲ್ಲಿ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 86 ಮತ್ತು ಸಹಾಯಕ ಕೃಷಿ ಅಧಿಕಾರಿ 586 ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಅಧಿಸೂಚನೆ ಜಾರಿ ಮಾಡಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು 07-10-2024ರಿಂದ 07-11-2024ರವರೆಗೆ ನಿಗದಿಪಡಿಸಲಾಗಿತ್ತು. ಸರ್ಕಾರವು ದಿನಾಂಕ:18-09-2024ರಂದು ಜಾರಿ ಮಾಡಿದ ಕ್ರೀಡಾ ಸಾಧಕ ಅಭ್ಯರ್ಥಿಗಳ ಮೀಸಲಾತಿಯನ್ನು ಸದರಿ ಹುದ್ದೆಗಳಿಗೂ ಅಳವಡಿಸಿಕೊಳ್ಳಬೇಕಾದ್ದರಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆಯನ್ನು ಮುಂದೂಡಲಾಗಿರುತ್ತದೆ ಎಂದಿದೆ.
ಪ್ರಸ್ತುತ ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 295 ಸೇನೆನಿ 2023 ದಿನಾಂಕ:04-12-2024ರಲಿ.. ಕ್ರೀಡಾ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರವು ಕರ್ನಾಟಕ ನಾಗರಿಕ ಸೇವಾ (ಸಾಮಾನ ನೇಮಕಾತಿ) ನಿಯಮಗಳು 19770 ನಿಯಮ 098 ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿರುವುದರಿಂದ ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡಾ 2ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ DOB:18-09-20240 ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಈಗಾಗಲೇ ದಿನಾಂಕ:20-09-2024ರಂದು ಜಾರಿ ಮಾಡಲಾಗಿರುವ ಅಧಿಸೂಚನೆಯಲ್ಲಿನ ಮೀಸಲಾತಿ ವರ್ಗೀಕರಣದ ಅನ್ವಯ ಆಯ್ಕೆ ಪ್ರಕ್ರಿಯೆಯನ್ನು ಮುಂದುವರೆಸಲಾಗುತ್ತಿದ್ದು ಅರ್ಜಿ ಸಲ್ಲಿಕೆಯ ಪ್ರಾರಂಭಿಕ ದಿನಾಂಕ ಮತ್ತು ಕೊನೆಯ ದಿನಾಂಕಗಳನ್ನು ಕೆಳಕಂಡಂತೆ ಮರು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಾರಂಭಿಕ ದಿನಾಂಕ 03-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-02-2025
ಮುಂದುವರೆದು, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದಿನಾಂಕ:20-09-2024ರ ಅಧಿಸೂಚನೆಯನ್ನು ನೋಡಬಹುದಾಗಿದೆ.
ಇದೇ ಮೊದಲ ಬಾರಿಗೆ 1 ಬಿಲಿಯನ್ ಡಾಲರ್ ದಾಟಿದ ಭಾರತದ ಕಾಫಿ ರಫ್ತು | Indian coffee exports
BREAKING : ಬೆಂಗಳೂರು ಜನತೆಗೆ ಬಿಗ್ ಶಾಕ್ : ನೀರಿನ ದರ ಏರಿಕೆ ಬಹುತೇಕ ಫಿಕ್ಸ್ : ಜ.2ನೇ ವಾರ ದರ ಏರಿಕೆ ಸಾಧ್ಯತೆ!