ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ತನ್ನ ಹಳೆಯ ನೇಮಕಾತಿಗಳಲ್ಲಿ ಒಂದನ್ನು ಪುನರಾರಂಭಿಸುವುದಾಗಿ ಘೋಷಿಸಿದೆ. ಆರ್ ಆರ್ ಬಿ ಟೆಕ್ನಿಷಿಯನ್ 14298 ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆ ಪುನರಾರಂಭಗೊಳ್ಳಲಿದೆ.
ಅರ್ಜಿ ಪ್ರಕ್ರಿಯೆ ಯಾವಾಗ ಪ್ರಾರಂಭವಾಗುತ್ತದೆ?
ಈ ನೇಮಕಾತಿಗೆ ಮರು ಅರ್ಜಿ ಪ್ರಕ್ರಿಯೆ ಅಕ್ಟೋಬರ್ 2 ರಿಂದ ಪ್ರಾರಂಭವಾಗಿದ್ದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 16 ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳು https://www.rrbapply.gov.in ಆರ್ಆರ್ಬಿ ವೆಬ್ಸೈಟ್ನಲ್ಲಿ ಲಭ್ಯವಿರುತ್ತವೆ. ಆರ್ಆರ್ಬಿ ಟೆಕ್ನಿಷಿಯನ್ ನೇಮಕಾತಿ 2024 ಅಡಿಯಲ್ಲಿ.. ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಹುದ್ದೆಗೆ 1092, ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗೆ 8052 ಮತ್ತು ಟೆಕ್ನಿಷಿಯನ್ ಗ್ರೇಡ್ 3 (ವರ್ಕ್ ಶಾಪ್ ಮತ್ತು ಪಿಯು) ಹುದ್ದೆಗೆ 5154 ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ಅರ್ಹತೆ
ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಐಟಿಐ ಉತ್ತೀರ್ಣರಾಗಿರಬೇಕು. ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಅಥವಾ B.Sc (ಭೌತಶಾಸ್ತ್ರ / ಎಲೆಕ್ಟ್ರಾನಿಕ್ಸ್ / ಐಟಿ) ಉತ್ತೀರ್ಣರಾಗಿರಬೇಕು.
ವಯೋಮಿತಿ
ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 36 ವರ್ಷ, ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗೆ 18 ರಿಂದ 33 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಮಾಜಿ ಸೈನಿಕರಿಗೆ 3 ರಿಂದ 8 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 8 ರಿಂದ 15 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ
ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಅಭ್ಯರ್ಥಿಗಳನ್ನು ಮೂರು ಹಂತಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಇದು ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ ಮೋಡ್) ಅನ್ನು ಒಳಗೊಂಡಿದೆ. ಪರೀಕ್ಷೆಯ ದಿನಾಂಕವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಇರುತ್ತದೆ. ಅಂತಿಮವಾಗಿ ನೇಮಕಾತಿಗೆ ಮೊದಲು ವೈದ್ಯಕೀಯ ಪರೀಕ್ಷೆ ಇರುತ್ತದೆ.