ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಚನ್ನಪಟ್ಟಣದಲ್ಲಿ ಆಗಸ್ಟ್ 30 ರಂದು ರಾಜ್ಯ ಸರ್ಕಾರದ ಬೃಹತ್ ಉದ್ಯೋಗ ಮೇಳ ಆಯೋಜಿಸುವುದಾಗಿ ಘೋಷಿಸಿದೆ.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳ ಯಶಸ್ವಿಯಾಗಿದ್ದು, ಎಲ್ಲಾ ಕಡೆಯೂ ಉದ್ಯೋಗ ಮೇಳ ಆಯೋಜಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಅದರಂತೆ ಆ.30 ರಂದು ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ.
ಕರ್ನಾಟಕ ಸರ್ಕಾರವು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ದಿನಾಂಕ 30 ಆಗಸ್ಟ್ 2024 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು https://skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದು.