ಬೆಂಗಳೂರು: ರಾಜ್ಯ ಸರ್ಕಾರದಿಂದ ಖಾಸಗಿ ವಲಯದಲ್ಲೂ ಕರ್ನಾಟಕದಲ್ಲಿ ಕನ್ನಡಿಗರಿಗೆ ಗ್ರೂಪ್-ಸಿ ಮತ್ತು ಡಿ ದರ್ಜೆಯ ಉದ್ಯೋಗಗಳಲ್ಲಿ ಶೇ.100ರಷ್ಟು ಮೀಸಲಾತಿ ಕಲ್ಪಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕೆ ಸಚಿವ ಸಂಪುಟ ಸಭೆಯಲ್ಲೂ ಸಿಎಂ ಸಿದ್ಧರಾಮಯ್ಯ ಅವರು ಅನುಮೋದನ ನೀಡಿದ್ದಾರೆ. ಹಾಗಾದ್ರೇ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಸಂಬಂಧ ಮಸೂದೆಯಲ್ಲಿ ಏನಿದೆ? ಅರ್ಹತೆ ಏನು? ಸೇರಿದಂತೆ ಇತರೆ ಮಾಹಿತಿಗಾಗಿ ಮುಂದೆ ಓದಿ.
ಮೀಸಲಾತಿ ಎಷ್ಟು?
ಆಡಳಿತಾತ್ಮಕ ಹುದ್ದೆಗೆ 50% – (ಸೂಪರ್‌ವೈಸರ್, ವ್ಯವಸ್ಥಾಪಕ, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು)
ಆಡಳಿತೇತರ ಹುದ್ದೆಗೆ 75% – (ಕ್ಲರ್ಕ್, ಕೌಶಲ ರಹಿತ, ಅರೆ ಕೌಶಲ ಗುತ್ತಿಗೆ ನೌಕರ)
ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ವಿಧೇಯಕದಿಂದ ಶೇ.50ರಷ್ಟು ಮ್ಯಾನೇಜ್ ಮೆಂಟ್ ಹುದ್ದೆಗಳು ಹಾಗೂ ಶೇ.75ರಷ್ಟು ನಾನ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ಕಲ್ಪಿಸಲಾಗುತ್ತಿದೆ.
ಅರ್ಹತೆಗಳು ಏನು?
ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಭಾಷೆಯಲ್ಲಿ ಮಾತನಾಡಲು, ಓದಲು ಹಾಗೂ ಬರೆಯಲು ಬರುವವರಿಗೆ ಮೀಸಲಾತಿ ಸಿಗಲಿದೆ. ಅಲ್ಲದೇ ನೋಡಲ್ ಏಜೆನ್ಸಿಗಳು ನಡೆಸುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವವರು ಈ ಮೀಸಲಾತಿಗೆ ಅರ್ಹರಿರುತ್ತಾರೆ.
ಮೀಸಲಾತಿ ನಿಯಮ ಉಲ್ಲಂಘಿಸಿದ್ರೆ ಏನು ಶಿಕ್ಷೆ?
ಇನ್ನೂ ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ವಿಧೇಯಕಕ್ಕೆ ಸಂಪುಟದ ಅಂಗೀಕಾರ ದೊರೆತಿದೆ. ಇನ್ನೂ ಈ ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆಗಳಿಗೆ ದಂಡ ವಿಧಿಸುವ ಅಂಶವನ್ನು ಸಹ ವಿಧೇಯಕದಲ್ಲಿ ಸೇರಿಸಲಾಗಿದೆ. ರಾಜ್ಯದಲ್ಲಿ ಕಟ್ಟು ನಿಟ್ಟಾಗಿ ಜಾರಿಗೆ ತರುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.
ರಾಜ್ಯದ ಎಲ್ಲಾ ಕೈಗಾರಿಕೆಗಳಲ್ಲಿ ಸಿ, ಡಿ ದರ್ಜೆಗೆ 100% ಉಲ್ಲಂಘಿಸಿದರೆ 25 ಸಾವಿರ ರೂ ವರೆಗೆ ದಂಡ ಕನಿಷ್ಟ 10 ಸಾವಿರ ರೂ., ಗರಿಷ್ಟ 25 ಸಾವಿರ ರೂ. ದಂಡ ವಿಧಿಸಿದ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧಿಸಬಹುದಾಗಿದೆ.
BIG NEWS: ಅಪರಿಚಿತ ಮಹಿಳೆಯ ಹೆಸರು, ಮೊಬೈಲ್ ಸಂಖ್ಯೆ ಕೇಳುವುದು ‘ಲೈಂಗಿಕ ಕಿರುಕುಳ’ವಲ್ಲ: ಹೈಕೋರ್ಟ್ ಮಹತ್ವದ ತೀರ್ಪು