ಬೆಂಗಳೂರು: ನಗರದಲ್ಲಿ ಆರಂಭಗೊಂಡಿರುವಂತ ನಮ್ಮ ಕ್ಲಿನಿಕ್ ನಲ್ಲಿ ( Namma Clinic ) ಖಾಲಿ ಇರುವಂತ ವೈದ್ಯರ ಹುದ್ದೆಗೆ ( Doctor Job ) ಅರ್ಜಿಯನ್ನು ಬಿಬಿಎಂಪಿಯಿಂದ ಆಹ್ವಾನಿಸಲಾಗಿದೆ.
BIG NEWS: ‘ವಾಂಟೆಂಡ್ ಕ್ರಿಮಿನಲ್’ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್: ‘BJP ಕಚೇರಿ’ ಈಗ ರೌಡಿಗಳ ಅಡ್ಡೆ – ಕಾಂಗ್ರೆಸ್
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಬಿಎಂಪಿಯ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಅನುಮೋದನೆಯಂತೆ, ನೂತನವಾಗಿ ಸ್ಥಾಪಿಸಲಾಗುವ “ನಮ್ಮ ಕ್ಲಿನಿಕ್”ಗಳಲ್ಲಿ ಕರ್ತವ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ 01 ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತಿವುಳ್ಳ ಎಂ.ಬಿ.ಬಿ.ಎಸ್ ಪದವಿ ಮತ್ತು ಕೆ.ಎಂ.ಸಿ ಕೌನ್ಸಿಲ್ ನೊಂದಾವಣಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದಿದ್ದಾರೆ.
BIG BREAKING NEWS: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಬೈಕ್ ಸವಾರರು ಸಾವು | BBMP Garbage Truck
ಮುಂದುವರಿದು, ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಜೆರಾಕ್ಸ್ ಪ್ರತಿ, ಭಾವಚಿತ್ರದೊಂದಿಗೆ ಮುಖ್ಯ ಆರೋಗ್ಯಾಧಿಕಾರಿ(ಸಾರ್ವಜನಿಕ ಆರೋಗ್ಯ) ರವರ ಕಛೇರಿ, ಅನೆಕ್ಸ್-2 ಕಟ್ಟಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಛೇರಿ, ಎನ್.ಆರ್.ಚೌಕ, ಬೆಂಗಳೂರು-560 002 ವಿಳಾಸಕ್ಕೆ ಖುದ್ದಾಗಿ – ಅರ್ಜಿ ಸಲ್ಲಿಸಲು ಕೋರಿದ್ದಾರೆ.