ಬೆಂಗಳೂರು: ನಮ್ಮ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇದೆ. ಸುಮಾರು 320 ಕಿಮಿ ಕರಾವಳಿ ಪ್ರದೇಶ ನಮ್ಮ ರಾಜ್ಯದಲ್ಲಿದ್ದು, ಇದುವರೆಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ನಮಗೆ ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಎರಡನೇ ದಿನದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಪಾಲಿಸಿ ಮಾಡಲು ಮಾಸ್ಟರ್ ಪ್ಲಾನ್ ಸಿದ್ದಪಡಿಸಿಕೊಂಡು ಬರುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿದರು.
ಕರಾವಳಿಯಲ್ಲಿ ಉತ್ತಮ ಪಂಚತಾರಾ ಹೋಟೆಲ್ ಇಲ್ಲ. ವಿದೇಶಿ ಪ್ರವಾಸಿಗರು ಬಂದರೆ ಉಳಿದುಕೊಳ್ಳಲು ಆ ಗುಣಮಟ್ಟದ ಹೋಟೆಲ್ ಅಗತ್ಯ. ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಪ್ರವಾಸೋದ್ಯಮ ಅಭಿವೃದ್ಧಿಯನ್ನು ಮಾಡಲು ನಮ್ಮಲ್ಲಿ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಕೂಡಲೇ ಸಿದ್ಧಪಡಿಸಬೇಕು. ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ ಎಂದರು
ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು. ಕರಾವಳಿಯಲ್ಲಿ ಸಿಆರ್‍ಝೆಡ್ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು.
ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಫೆÇೀಕಸ್ ದೊರೆಯುತ್ತಿದೆ. 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015 ಯನ್ನು ಸಮರ್ಪಕವಾಗಿ ಅನುμÁ್ಠನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ. ಪ್ರವಾಸೋದ್ಯಮತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಮಾಸ್ಟರ್ ಪ್ಲಾನ್ ಜಿಲ್ಲಾವಾರು ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿಕ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಜನರು, ಎನ್‍ಜಿಒಗಳ ಸಹಯೋಗ ಪಡೆದುಕೊಳ್ಳಬೇಕು. ಜಿಲ್ಲಾ ಪ್ರವಾಸೋದ್ಯಮ ಕುರಿತು ಪುಸ್ತಕಗಳನ್ನು ಬಿಡುಗಡೆಗೊಳಿಸಿ. ಸ್ಮಾರಕ ದತ್ತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಆಸಕ್ತರು ಸ್ಮಾರಕಗಳನ್ನು ದತ್ತು ಪಡೆದು ಸಂರಕ್ಷಣೆ ಕಾರ್ಯ ಮಾಡಬಹುದಾಗಿದೆ ಎಂದು ಸೂಚಿಸಿದರು.
ಕರಾವಳಿಯಲ್ಲಿ ಮೆಡಿಕಲ್ ಕಾಲೇಜುಗಳು, ಬಂದರುಗಳು, ದೇವಾಲಯಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳು ಇವೆ. ಆದರೆ ಒಂದೇ ಒಂದು ಪಂಚತಾರಾ ಹೊಟೇಲ್ ಇಲ್ಲ. ಸಂಜೆಯಾಗುತ್ತಿದ್ದಂತೆಯೇ ಇಡೀ ಮಂಗಳೂರು ಮುಚ್ಚಿಕೊಳ್ಳುತ್ತದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರತ್ಯೇಕ ಯೋಜನೆಯನ್ನು ರೂಪಿಸಬೇಕಿದೆ. ಕರಾವಳಿಯ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಇದರಿಂದ ತೆರಿಗೆ ಸಂಗ್ರಹ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ಸೃಷ್ಠಿಸಲು ಸಾಧ್ಯವಿದೆ. ಕರಾವಳಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈ, ಗಲ್ಫ್ ದೇಶಗಳಿಗೆ ಉದ್ಯೋಗ ಅರಸಿಕೊಂಡು ಹೋಗುವ ಪರಿಸ್ಥಿತಿ ಬದಲಾಗಬೇಕಿದೆ ಎಂದರು.
ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿವೆ. ಇವುಗಳ ಮಹತ್ವ ಅರಿತು ಗೈಡ್ ಗಳನ್ನು ನೇಮಿಸುವುದಾಗಲಿ, ಸಮೀಕ್ಷೆ ನಡೆಸಿ, ಸಂರಕ್ಷಣೆ ಮಾಡಿ ನಿಮ್ಮ ನಿಮ್ಮ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಆಕ್ಷನ್uಟಿಜeಜಿiಟಿeಜ ಪ್ಲಾನ್ ಮಾಡಿ, ಬಜೆಟ್ ಪ್ಲಾನ್ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬಹುದು. ನಿಮ್ಮ ಜಿಲ್ಲೆಗಳಲ್ಲಿ ಎμÉ್ಟಲ್ಲಾ ಉತ್ತಮ ಸಾಹಿತಿ, ಬರಹಗಾರರು, ಕಲಾವಿದರು ಇದ್ದಾರೆ. ಅವರ ನೆರವು ಪಡೆದು 3 ತಿಂಗಳಲ್ಲಿ ಮಾಸ್ಟರ್ ಪ್ಲಾನ್ ಸಿದ್ದಪಡಿಸಿ ಪ್ರವಾಸೋದ್ಯಮ ಸಮಿತಿ ಮುಂದೆ ಇಡಿ. ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವವರೂ ಇರ್ತಾರೆ. ಅವರನ್ನು ಗುರುತಿಸಿ. ನೀವು ಸಿದ್ದಪಡಿಸುವ ಮಾಸ್ಟರ್ ಪ್ಲಾನ್ ಗೆ ಹಣಕಾಸು ಒದಗಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ಅಭಿಪ್ರಾಯಪಟ್ಟರು.
ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಈ ಬಗ್ಗೆ ಗಮನ ಹರಿಸಿ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿದರೆ ರಾಜ್ಯದ ಪ್ರತೀ ಜಿಲ್ಲೆಗಳನ್ನೂ ಪ್ರವಾಸೋದ್ಯಮ ಜಿಲ್ಲೆಗಳನ್ನಾಗಿ ಮಾಡಬಹುದಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಸ್ತಾವನೆಗೆ ಮುಂದಿಟ್ಟರು. ಇದಕ್ಕೆ ಧ್ವನಿಗೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಅತೀ ವಿಸ್ತಾರವಾದ ಕರಾವಳಿ ಪ್ರದೇಶವಿದೆ. ಕರಾವಳಿಯುದ್ಧಕ್ಕೂ ನಾವು ಪ್ರವಾಸೋದ್ಯಮ ಬೆಳೆಸುವ, ಅಭಿವೃದ್ಧಿಪಡಿಸುವ ಅವಕಾಶಗಳು ಹೇರಳವಾಗಿವೆ ಎಂದರು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗುತ್ತಿರುವ ರಸ್ತೆ ಅಪಘಾತಗಳಿಗೆ ಗರಂ ಆದ ಮುಖ್ಯಮಂತ್ರಿಗಳು, ಅಧಿಕಾರಿಗಳ ಉದಾಸೀನದಿಂದ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸಲಾಗುವುದಿಲ್ಲ. ಅಧಿಕಾರಿಗಳು ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಿಸುವಂತೆ ಖಡಕ್ ಸೂಚನೆ ನೀಡಿದರು.
ಅಪಘಾತಗಳ ನಿಯಂತ್ರಣಕ್ಕೆ ಸಮನ್ವಯ ಅಗತ್ಯವಿದೆ. ಅಪಘಾತ ವಲಯ ಮತ್ತು ಬ್ಲಾಕ್ ಸ್ಪಾಟ್ ಗುರುತಿಸಿ ಕೈಕಟ್ಟಿ ಕುಳಿತರೆ ನಿಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ರಸ್ತೆ ಅಪಾಘಾತಗಳನ್ನು ತಪ್ಪಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುμÁ್ಠನಕ್ಕೆ ತರಬೇಕು ಎಂದು ತಿಳಿಸಿದರು.
ಕಂದಾಯ, ಪೆÇಲೀಸ್, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್‍ಸ್ಟಾಟ್‍ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ ಮತ್ತು ಟ್ರಾಮಾ ಸೆಂಟರ್ ನೆಟ್‍ವರ್ಕ್ ಮಾಡಬೇಕು ಎಂದರು.
ಶಾಲೆಯಿಂದ ಯಾವ ಮಕ್ಕಳೂ ಸಹ ಹೊರಗುಳಿಯಬಾರದು. ಪ್ರತಿ ವರ್ಷ 6ರಿಂದ 16 ವರ್ಷದೊಳಗಿನ ಮಕ್ಕಳ ಸಮೀಕ್ಷೆಯನ್ನು ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರಿಸಲು ಕ್ರಮ ಕೈಗೊಳ್ಳಬೇಕು. ಸಾಮಾಜಿಕ-ಆರ್ಥಿಕ ಕಾರಣದಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಕಾಳಜಿ ಇಟ್ಟು ಶಿಕ್ಷಣ ಒದಗಿಸಲು ಸೂಚನೆ ನೀಡಿದ ಮುಖ್ಯಮಂತ್ರಿಗಳು, ರಾಜಪ್ಪ ಎನ್ನುವ ಶಿಕ್ಷಕರು ಶಾಲೆಯಿಂದ ಹೊರಗೆ ಉಳಿದಿದ್ದ ನನ್ನನ್ನು ಶಾಲೆಗೆ ಸೇರಿಸದಿದ್ದರೆ ಇಂದು ನಾನು ಮುಖ್ಯಮಂತ್ರಿಯೇ ಆಗುತ್ತಿರಲಿಲ್ಲ ಎಂದು ತಿಳಿಸಿದರು.
ಬಜೆಟ್‍ನಲ್ಲಿ ಘೋಷಿಸಿರುವಂತೆ 2 ಸಾವಿರ ಪಂಚಾಯತ್ ವ್ಯಾಪ್ತಿಯಲ್ಲಿ ಮಾದರಿ ಶಾಲೆಗಳನ್ನು ಸಿಎಸ್‍ಆರ್ ಅಡಿಯಲ್ಲಿ ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದಲ್ಲಿ ಖಾಸಗಿ ಕಂಪೆನಿಗಳು ಕಾಯ್ದೆ ಪ್ರಕಾರ ಕಳೆದ ಸಾಲಿನಲ್ಲಿ 8163 ಕೋಟಿ ಕಡ್ಡಾಯವಾಗಿ ಸಿಎಸ್‍ಆರ್ ಅಡಿ ವೆಚ್ಚ ಮಾಡಬೇಕಾಗಿತ್ತು. ಖಾಸಗಿ ಕಂಪೆನಿಗಳು ಈ ಅವಧಿಯಲ್ಲಿ 4 ಲಕ್ಷ ಕೋಟಿ ರೂ. ಲಾಭ ಗಳಿಸಿವೆ. 1190 ಕೋಟಿ ಕಳೆದ ವರ್ಷ ಸಿಎಸ್‍ಆರ್ ಅಡಿ ವೆಚ್ಚ ಮಾಡಿದ್ದು, ಶೇ.30ರಷ್ಟು ಮಾತ್ರ ಸಿಎಸ್‍ಆರ್ ಅಡಿ ಬಳಸುತ್ತಿವೆ ಎಂದರು.
ರಾಮನಗರ ಜಿಲ್ಲೆಯಲ್ಲಿ ಪೈಲೆಟ್ ಯೋಜನೆಯಾಗಿ ಆರಂಭಿಸಲಾಗಿದ್ದು, ಮೂರು ಪಂಚಾಯತ್‍ಗಳಿಗೆ ಒಂದು ಶಾಲೆಯಂತೆ ಈಗಾಗಲೇ 20 ಶಾಲೆ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಟೊಯೋಟಾ ಕಂಪೆನಿ ಒಂದೇ 20 ಕೋಟಿ ಸಿಎಸ್‍ಆರ್ ಅನುದಾನವನ್ನು ಒದಗಿಸಿದ್ದಾರೆ. ನಾವು 3 ಎಕರೆ ಜಮೀನು ಒದಗಿಸಿ, ಶಾಲೆಯ ಮಾದರಿಯನ್ನು ಮಾತ್ರ ನಾವು ಒದಗಿಸುತ್ತೇವೆ. ನಿರ್ಮಾಣ ಕಾರ್ಯವನ್ನು ಟಯೋಟಾ ಕಂಪನಿಯವರೇ ಮಾಡುತ್ತಾರೆ.
ರಾಜ್ಯದಲ್ಲಿ ಈಗಾಗಲೇ 500 ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 2 ಸಾವಿರ ಶಾಲೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಪ್ರಮುಖ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ.
ಬಾಲವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ಸಂಪೂರ್ಣ ತಡೆಗಟ್ಟಲು ಸಂಪೂರ್ಣ ಕ್ರಮ ವಹಿಸಬೇಕು ಎಂದ ಮುಖ್ಯಮಂತ್ರಿಗಳು ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾದರು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆ ಮಾಡಲು ಸೂಚಿಸಿದರು.
ರಾಜ್ಯದಲ್ಲಿ 2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರ 4180 ಹುದ್ದೆಗಳು ಹಾಗೂ ಸಹಾಯಕಿಯರ 9411 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು. ನಗರ ಪ್ರದೇಶದಲ್ಲಿ ಸಹಾಯಕಿಯರ ಹುದ್ದೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್ ಸಜ್ಜುಗೊಳಿಸಬೇಕು. ಮೆಡಿಕಲ್ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‍ಫೆÇೀರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು.
ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್‍ಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದ್ದು, 42 ಕಡೆಗಳಲ್ಲಿ ಕಟ್ಟಡ ಗುರುತಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ 503 ನಮ್ಮ ಕ್ಲಿನಿಕ್‍ಗಳು ಕಾರ್ಯಾಚರಿಸುತ್ತಿವೆ. ನಮ್ಮ ಕ್ಲಿನಿಕ್‍ಗಳಲ್ಲಿ ಲಭ್ಯವಿರುವ ಸೇವೆಗಳ ಮಾಹಿತಿಯನ್ನು ಪ್ರಚುರಪಡಿಸಬೇಕು ಎಂದು ತಿಳಿಸಿದರು.
ದೌರ್ಜನ್ಯ ತಡೆ ಅಧಿನಿಯಮದ ಅಡಿ ದಾಖಲಾಗಿರುವ ಒಟ್ಟು 26 ಕೊಲೆ ಪ್ರಕರಣಗಳಲ್ಲಿ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಬೇಕಾಗಿದ್ದು, ಆದಷ್ಟು ಬೇಗನೆ ನೌಕರಿ ಒದಗಿಸಬೇಕು. ಜಿಲ್ಲೆಯಲ್ಲಿ ಉಪ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಸಬೇಕು. ಸಿಂಧುತ್ವ ಪ್ರಮಾಣ ಪತ್ರವನ್ನು ಒಂದು ತಿಂಗಳ ಒಳಗಾಗಿ ನೀಡಬೇಕು. ಪ್ರಸ್ತುತ 2684 ಅರ್ಜಿಗಳು ಬಾಕಿಯಿದ್ದು, ಅರ್ಹತೆ ಇದ್ದವರಿಗೆ ತಕ್ಷಣ ಪ್ರಮಾಣ ಪತ್ರ ನೀಡಬೇಕು. ವಿನಾಕಾರಣ ಸಿಂಧುತ್ವ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿ ಅವರನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗಂಗಾಕಲ್ಯಾಣ ಯೋಜನೆಯಡಿ ಒಟ್ಟು 9616 ಬೋರ್‍ವೆಲ್ ಕೊರೆಯಲಾಗಿದ್ದು, 4413 ಬೋರ್‍ವೆಲ್‍ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನೂ 5203 ಬೋರ್‍ವೆಲ್‍ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಕಾಲೇಜುಗಳು ಹೆಚ್ಚಿರುವ ಕಾರಣ ಜಿಲ್ಲಾ ಮಟ್ಟದಲ್ಲಿ ಹೊಸ ಹಾಸ್ಟೆಲ್‍ಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದರು.
ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಜಿಲ್ಲಾಧಿಕಾರಿಗಳು ಚುರುಕುಗೊಳಿಸಬೇಕು. ರಾಜ್ಯದಲ್ಲಿ 217 ವಕ್ಫ್ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಬಾಕಿಯಿದೆ. 22581 ವಕ್ಫ್ ಖಾತೆ ಮ್ಯುಟೇಶನ್ ಬಾಕಿಯಿದ್ದು, ಇದನ್ನು ತ್ವರಿತಗೊಳಿಸಬೇಕು. ನ್ಯಾಯಾಲಯಗಳಲ್ಲಿ ತಡೆ ಇರುವ ಪ್ರಕರಣಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಜಿಲ್ಲೆಗಳಲ್ಲಿ ಅನುμÁ್ಠನಗೊಳಿಸಬೇಕು ಎಂದರು.
ರಾಜ್ಯದಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮದಡಿ 298798 ಅರ್ಜಿ ಸ್ವೀಕೃತಗೊಂಡಿದ್ದು, 258086 ಅರ್ಜಿಗಳು ತಿರಸ್ಕøತಗೊಂಡಿವೆ. 24186 ಅರ್ಜಿಗಳು ಇತ್ಯರ್ಥವಾಗದೇ ಬಾಕಿಯಿವೆ. ಇದುವರೆಗೆ 16426 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 56479 ಎಕ್ರೆ ಭೂಮಿ ಮಂಜೂರು ಮಾಡಲಾಗಿದೆ. ಅರಣ್ಯವಾಸಿಗಳಿಗೆ ಭೂಮಿ ಹಕ್ಕು ಖಾತ್ರಿಪಡಿಸಲು ಮುಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ರಾಜ್ಯದ 5 ಜಿಲ್ಲೆಗಳ ಹಾಡಿಗಳಲ್ಲಿ ವಾಸಿಸುತ್ತಿರುವ ಜೇನುಕುರುಬ ಹಾಗೂ ಕೊರಗ ಜನಾಂಗದವರಿಗೆ ಸೌಲಭ್ಯಗಳನ್ನು ಕಲ್ಪಿಸಲು ಪಿಎಂ ಜನಮನ್ ಯೋಜನೆ ಜಾರಿಯಲ್ಲಿದೆ. ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ 44040 ಜೇನುಕುರುಬ ಹಾಗೂ 13007 ಕೊರಗರು ಇದ್ದಾರೆ. ಈ ಜನಾಂಗದ 19 ಸಾವಿರ ಕುಟುಂಬಗಳಿದ್ದು, 6871 ಕುಟುಂಬಗಳಿಗೆ ಮಾತ್ರ ಮನೆಯಿದೆ. 12ಸಾವಿರ ಮನೆಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಸ್ಥಳ ಗುರುತಿಸಿ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು. ಗುರುತಿನ ಚೀಟಿ ಸಮಸ್ಯೆಯನ್ನು ಬಗೆಹರಿಸಬೇಕು. ಈ ಜನಾಂಗಗಳ ಅಭಿವೃದ್ಧಿಗೆ 9 ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಯೋಜನೆಗಳಿದ್ದು, ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಅನುμÁ್ಠನ ಮಾಡಬೇಕು ಎಂದು ಸೂಚನೆ ನೀಡಿದರು.
ಈ ವರ್ಷ ಜಾನುವಾರುಗಳ ಗಣತಿ ಕಾರ್ಯ ಕೈಗೊಳ್ಳಲು ಉದ್ದೇಶಿಸಲಾಗಿದೆ. ಇದನ್ನು ವೈಜ್ಞಾನಿಕವಾಗಿ ನಿರ್ವಹಿಸಬೇಕು. ರಾಜ್ಯದಲ್ಲಿ 2.4 ಕೋಟಿ ಲೀಟರ್ ಪ್ರತಿದಿನ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದನೆ ಹೆಚ್ಚಿಸಲು ಪೂರಕವಾಗಿ ಲಸಿಕಾ ಕಾರ್ಯಕ್ರಮವನ್ನು ಸಮಗ್ರವಾಗಿ ಕೈಗೊಳ್ಳಬೇಕು. ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪೆÇ್ರೀತ್ಸಾಹಿಸಲು ಶೇ.6ರ ಬಡ್ಡಿ ಸಹಾಯಧನ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 2759 ವೈಯಕ್ತಿಕ ಫಲಾನುಭವಿಗಳಿಗೆ ರೂ.1ಕೋಟಿ ಅನುದಾನದಲ್ಲಿ ಸಹಾಯಧನ ಒದಗಿಸಲು ನಿಗದಿಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳು ಅರ್ಹ ಮಹಿಳೆಯರಿಗೆ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಜಾನುವಾರುಗಳ ಮರಣಕ್ಕೆ ಪರಿಹಾರವನ್ನು ತಕ್ಷಣ ಒದಗಿಸಬೇಕು. ಪ್ರಸ್ತುತ ಸಾಲಿನಲ್ಲಿ ಸಾವಿಗೀಡಾದ 10,800 ಜಾನುವಾರುಗಳಿಗೆ 5.83 ಕೋಟಿ ರೂ. ಪರಿಹಾರ ಒದಗಿಸಲಾಗಿದೆ. ಈ ಹಿಂದೆ ಸಾವಿಗೀಡಾದ ಜಾನುವಾರುಗಳಿಗೆ ನೀಡಬೇಕಾದ ಪರಿಹಾರ ಬಾಕಿ ಕುರಿತು ಪರಿಶೀಲನೆ ನಡೆಸಬೇಕು ಎನ್ನುವ ಸೂಚನೆಯನ್ನು ನೀಡಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸಚಿವ ಸಂಪುಟದ ಸದಸ್ಯರು, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಘೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು