ಮಂಗಳೂರು : ಪದವಿ ಮುಗಿಸಿ ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್, ನಿಮಗೆ ನವಮಂಗಳೂರು ಬಂದರಿನಲ್ಲಿ ಕೆಲಸ ಮಾಡುವ ಆಸಕ್ತಿ ಇದ್ದರೆ ಈಗಲೇ ಅರ್ಜಿ ಸಲ್ಲಿಸಬಹುದು.

ನವಮಂಗಳೂರು ಬಂದರು ಟ್ರಸ್ಟ್ ನಲ್ಲಿ 2 ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 30, 2022 ಕೊನೆಯ ದಿನವಾಗಿದ್ದು,. ಆಫ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ನವ ಮಂಗಳೂರು ಬಂದರು ಟ್ರಸ್ಟ್ ತಿಳಿಸಿದೆ, ಆಯ್ಕೆಯಾದವರಿಗೆ 40,000-1,40,000 ರೂಪಾಯಿವರೆಗೂ ಮಾಸಿಕ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವ ಮಂಗಳೂರು ಬಂದರು, ಪ್ರಾಧಿಕಾರ ಪಣಂಬೂರು ಮಂಗಳೂರು -575010 ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆ ದಿನವಾಗಿದೆ. ಲಿಖಿತ, ಸಂದರ್ಶನದ ಮೂಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ನವ ಮಂಗಳೂರು ಬಂದರು ಟ್ರಸ್ಟ್ ಸಂಪರ್ಕಿಸಬಹುದಾಗಿದೆ.

BREAKING NEWS : ವಜಾ ಮುಂದುವರೆಸಿದ ಜನಪ್ರಿಯ ‘ವೇದಾಂತು’ ; 385 ಉದ್ಯೋಗಿಗಳಿಗೆ ‘ಕಂಪನಿ’ಯಿಂದ ಗೇಟ್ ಪಾಸ್ |Vedantu fires 385 more employees

BREAKING NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ಐವರು ‘IAS’ ಅಧಿಕಾರಿಗಳ ವರ್ಗಾವಣೆ

Share.
Exit mobile version