ಶಿವಮೊಗ್ಗ : ‘SSLC’ ಪಾಸಾದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಅಂಗನವಾಡಿಯಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಲಾಗಿದೆ.
ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 88 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 13ರ ಒಳಗೆ ಅರ್ಜಿ ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ SSLC ಉತ್ತೀರ್ಣ ಕಡ್ಡಾಯವಾಗಿದ್ದು,ಅಂಗನವಾಡಿ ಸಹಾಯಕಿ ಹುದ್ದೆಗೆ 4ನೇ ತರಗತಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 13 ರ ಒಳಗೆ ಇಲಾಖೆಯ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾ ಣ ಇಲಾಖೆಯ ಅಧಿಕೃತ ವೆಬ್‌ಸೈಟ್ anganwadirecruit.kar.nic.in ಗೆ ಭೇಟಿ ನೀಡಬಹುದಾಗಿದೆ.
ಟ್ವಿಟರ್ ಗೆ ಭಾರತೀಯ ಕಾನೂನಿಗೆ ಬದ್ಧವಾಗಿರಲು ಅಥವಾ ದೇಶದಿಂದ ಹೊರಹೋಗುವಂತೆ ಎಚ್ಚರಿಸಿದ ಆಂಧ್ರ ಹೈಕೋರ್ಟ್
ಜಾರ್ಖಂಡ್ ನಲ್ಲಿ ಅಕ್ರಮ ಗಣಿಗಾರಿಕೆ ವೇಳೆ ಕುಸಿದ ಕಲ್ಲಿದ್ದಲು ಗಣಿ : ಹಲವಾರು ಜನ ಸಿಲುಕಿರುವ ಶಂಕೆ