ಗದಗ : ಗದಗ ಡಿಸಿ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಚಿಸುವ ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ 58 ಕ್ಲೀನರ್ ಹಾಗೂ ಲೋಡರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮುನ್ಸಿಪಾಲಿಟಿಯಲ್ಲಿ ಈಗಾಗಲೇ ಕೆಲಸ ಮಾಡಿದ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ನವೆಂಬರ್ 28 ಕೊನೆಯ ದಿನವಾಗಿದೆ.
18 ವರ್ಷ ಹಾಗೂ ಗರಿಷ್ಠ 55 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 17,000 ರೂ.ನಿಂದ 28.950ರೂ.ವರಗೆ ವೇತನ ನೀಡಲಾಗುತ್ತದೆ.ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಮೊದಲನೇ ಮಹಡಿ ಜಿಲ್ಲಾ ನಗರಾಭಿವೃದ್ಧಿ ಘಟಕ, ಕೊಠಡಿ ಸಂಖ್ಯೆ-123, ಜಿಲ್ಲಾಧಿಕಾರಿಗಳ ಕಚೇರಿ, ಗದಗ ಈ ವಿಳಾಸಕ್ಕೆ ನವೆಂಬರ್ 28, 2022 ರೊಳಗೆ ಅರ್ಜಿ ಕಳುಹಿಸಬೇಕು. ಅರ್ಜಿಯನ್ನು ಜಿಲ್ಲಾ ನಗರಾಭಿವೃದ್ಧಿ ಘಟಕ, ಜಿಲ್ಲಾಧಿಕಾರಿಗಳ ಕಚೇರಿ,ಗದಗ ಇಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
RAIN UPDATE: ಕರ್ನಾಟಕ ಸೇರಿದಂತೆ ದಕ್ಷಿಣದ ಈ ರಾಜ್ಯಗಳಲ್ಲಿ ಸೋಮವಾರದವರೆಗೂ ಭಾರಿ ಮಳೆ IMDಯಿಂದ ಎಚ್ಚರಿಕೆ
ಕೆಂಪೇಗೌಡರ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿಲ್ಲ – ಸಚಿವ ಅಶ್ವತ್ಥನಾರಾಯಣ