ಕೆಎನ್ ಎನ್ ಡಿಜಿಟಲ್ ಡೆಸ್ಕ್ : ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪಾಸಾದವರಿಗೆ ಭರ್ಜರಿ ಸಿಹಿಸುದ್ದಿ ಇಲ್ಲಿದೆ. ಹೌದು, ಭಾರತೀಯ ಸೇನೆಯಲ್ಲಿ ಬರೋಬ್ಬರಿ 3068 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಟ್ರೇಡ್ಸ್ಮ್ಯಾನ್ ಮೇಟ್, ಫೈರ್ಮ್ಯಾನ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 22 ಆಗಿದೆ.
ಒಟ್ಟು 3068 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಪ್ರತಿ ತಿಂಗಳು 18000-63200 ರೂ. ಸಂಬಳ ನೀಡಲಾಗುತ್ತದೆ. ಆಸಕ್ತರು ಅಧಿಕೃತ ವೆಬ್ಸೈಟ್: aocrecruitment.gov.in ಭೇಟಿ ನೀಡಬಹುದಾಗಿದೆ. ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದೈಹಿಕ ಪರೀಕ್ಷೆಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
ವಿಕಲಚೇತನ) ಅಭ್ಯರ್ಥಿಗಳು: 10 ವರ್ಷಗಳು
ಕುಟುಂಬ ಕಲಹ, ವ್ಯಾಪಾರ ಅಭಿವೃದ್ಧಿಗೆ ಪರಿಹಾರವಿದೆ: ಇಂದಿನ ರಾಶಿಭವಿಷ್ಯ ನೋಡಿ
‘ವಿಶ್ವವಿಖ್ಯಾತ ಮೈಸೂರು ದಸರಾ’ಗೆ ತೆರಳೋ ಪ್ರವಾಸಿಗರಿಗೆ ಗುಡ್ ನ್ಯೂಸ್: ‘ರೈಲ್ವೆ ವಸ್ತು ಸಂಗ್ರಹಾಲಯ’ ಸಮಯ ವಿಸ್ತರಣೆ