ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಕರೂರ್ ವೈಶ್ಯ ಬ್ಯಾಂಕ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಪದವಿ ಪಾಸಾದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31ರ ತನಕ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದ್ದು, ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ನವೆಂಬರ್ 30ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ಮತ್ತು ಗರಿಷ್ಠ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 18,000 ರೂ. ನಿಗದಿ ಮಾಡಲಾಗಿದೆ.
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ. ವೆಬ್ ಸೈಟ್ ವಿಳಾಸ https://www.kvb.co.in/ ವೀಕ್ಷಿಸಬಹುದಾಗಿದೆ.
ನಿಮಗೆ ಗೊತ್ತಾ..? ಚಳಿಗಾಲದಲ್ಲಿ ‘ಸಿಹಿಗೆಣಸು’ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದಂತೆ
Jalebi : ನಿಮ್ಗೆ ಗೊತ್ತಾ? ಅದೆಷ್ಟೊ ಜನರ ಈ ಫೆವರೇಟ್ ʼಸ್ಟೀಟ್ʼ.. ಅಸಲಿ ಆರೋಗ್ಯದ ಗುಟ್ಟು..!