ಬೆಂಗಳೂರು: ಬಯೋಕಾನ್ ಕಾರ್ಯನಿರ್ವಾಹಕ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ ಅವರು ತಮ್ಮ 72 ನೇ ವಯಸ್ಸಿನಲ್ಲಿ ಸೋಮವಾರ ನಿಧನರಾದರು.
ವಿಲ್ಸನ್ ಗಾರ್ಡನ್ಸ್ ಚಿತಾಗಾರದಲ್ಲಿ ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಬಯೋಕಾನ್ ಅಧಿಕೃತ ವೆಬ್ಸೈಟ್ನ ಪ್ರಕಾರ, ಜಾನ್ ಶಾ ನಿರ್ದೇಶಕರ ಮಂಡಳಿಯ ಸದಸ್ಯರಾಗಿದ್ದರು. ಇದಲ್ಲದೇ ಅವರು ವಿದೇಶಿ ಪ್ರವರ್ತಕರಾಗಿ ಮತ್ತು ವಿವಿಧ ಬಯೋಕಾನ್ ಗ್ರೂಪ್ ಕಂಪನಿಗಳ ಸಲಹಾ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದರು. ಅವರು ಮಧುರಾ ಕೋಟ್ಸ್ ಲಿಮಿಟೆಡ್ನ ಮಾಜಿ ಅಧ್ಯಕ್ಷರಾಗಿ ಮತ್ತು ಕೋಟ್ಸ್ ವಿಯೆಲ್ಲಾ ಗ್ರೂಪ್ನ ಮಾಜಿ ಹಣಕಾಸು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದರು.