ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿಯು ಡಿಸೆಂಬರ್.31ರಂದು ನಡೆಸಲು ನಿರ್ಧರಿಸಿದ್ದಂತ ಸಾರಿಗೆ ಸಿಬ್ಬಂದಿಗಳ ಮುಷ್ಕರವನ್ನು ಹಿಂಪಡೆಯಲಾಗಿದೆ. ಹೀಗಾಗಿ ಡಿಸೆಂಬರ್.31ರಂದು ಎಂದಿನಂತೆ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ( KSRTC Bus Service ) ಇರಲಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೆ ಎಸ್ ಆರ್ ಟಿಸಿ ಸಿಬ್ಬಂದಿಗಳ ಜಂಟಿ ಕ್ರಿಯಾ ಸಮಿತಿಯ ಬೇಡಿಕೆ ಕುರಿತಂತೆ ಚರ್ಚೆ ನಡೆಸಿದರು. ಈ ಬೇಡಿಕೆಗಳನ್ನು ಈಡೇರಿಸೋದಕ್ಕೆ ಸಕಾರಾತ್ಮಕವಾಗಿಯೇ ಸಿಎಂ ಸಿದ್ಧರಾಮಯ್ಯ ( CM Siddaramaiah ) ಸ್ಪಂದಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಸಾರಿಗೆ ಸಿಬ್ಬಂದಿಗಳ ಬೇಡಿಕೆ ಈಡೇರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾರಣ, ಕೆ ಎಸ್ ಆರ್ ಟಿಸಿ ಸಿಬ್ಬಂದಿಗಳ ಜಂಟಿ ಕ್ರಿಯಾ ಸಮಿತಿಯು ಡಿ.31ರ ಮುಷ್ಕರವನ್ನು ಹಿಂಪಡೆಯಲು ನಿರ್ಧರಿಸಿದೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಸಂಕ್ರಾಂತಿ ಹಬ್ಬದ ಬಳಿಕ ಸಭೆ ನಡೆಸಿ ಸಾರಿಗೆ ಸಿಬ್ಬಂದಿಗಳ ಬೇಡಿಕೆ ಈಡೇರಿಕೆ ಕುರಿತಂತೆ ಸೂಕ್ತ ತೀರ್ಮಾನ ಕೈಗೊಳ್ಳೋದಾಗಿಯೂ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಡಿಸೆಂಬರ್ 31ರಂದು ಎಂದಿನಂತೆ ಕೆ ಎಸ್ ಆರ್ ಟಿ ಸಿ ಬಸ್ಸುಗಳು ರಸ್ತೆ ಇಳಿಯಲಿದ್ದಾವೆ.
ಇನ್ನೂ ವರ್ಷಾಂತ್ಯದ ದಿನವಾಗಿದ್ದಂತ ಡಿ.31ರಂದು ಸಾರಿಗೆ ಬಸ್ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿದ್ದರಿಂದ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ, ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ ಎನ್ನಲಾಗಿತ್ತು. ಆದರೇ ಈಗ ಮುಷ್ಕರ ವಾಪಾಸ್ಸು ಪಡೆದ ಹಿನ್ನಲೆಯಲ್ಲಿ, ಎಂದಿನಂತೆ ಸಾರಿಗೆ ಬಸ್ಸುಗಳ ಸಂಚಾರ ಇರಲಿದ್ದಾವೆ.
ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ
ಅಫ್ಘಾನ್ ತಾಲಿಬಾನ್ ಪಡೆಗಳ ಗುಂಡಿನ ದಾಳಿ: ಪಾಕ್ ಸೈನಿಕ ಸಾವು, 11 ಮಂದಿಗೆ ಗಾಯ
BREAKING: KPSC ಕೆಎಎಸ್ ಪರೀಕ್ಷೆಯಲ್ಲಿ ಮಹಾ ಎಡವಟ್ಟು: OMR ಶೀಟ್ ನೋಂದಣಿ ಸಂಖ್ಯೆಯೇ ಬದಲಾವಣೆ