ಚಾಮರಾಜನಗರ : ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಮುಗಿಸಿದ್ದಾಯಿತು. ಈಗ ಎಚ್ ಡಿ ಕುಮಾರಸ್ವಾಮಿ ಟಾರ್ಗೆಟ್ ಆಗಿದ್ದಾರೆ. ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯಲು ಪ್ರಹ್ಲಾದ್ ಜೋಶಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೆಳೆದು ಎಚ್ ಡಿ ಕುಮಾರಸ್ವಾಮಿ ಸರ್ವನಾಶಕ್ಕೆ ಪ್ಲಾನ್ ಮಾಡಿದ್ದಾರೆ ಎಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದಾಸನಪುರ ಗ್ರಾಮದಲ್ಲಿ ವಾಗ್ದಾಳಿ ನಡೆಸಿದರು.
ಜೆಡಿಎಸ್ ಪ್ರಾಬಲ್ಯ ಇರುವ ಸ್ಥಳದಲ್ಲಿ ಪಾದಯಾತ್ರೆ ಮಾಡುತ್ತಿರುವುದು.ರಾಮನಗರ, ಮಂಡ್ಯ, ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಪ್ರಾವಲ್ಯವಿದೆ ಪಾದಯಾತ್ರೆ ಮೂಲಕ ಜೆಡಿಎಸ್ ಕಾರ್ಯಕರ್ತರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದಾರೆ ಎಂದು ಕೃಷ್ಣ ಭೈರೇಗೌಡ ಗಂಭೀರ ಆರೋಪ ಮಾಡಿದರು.
ರಾಜ್ಯಪಾಲರು ಕರ್ನಾಟಕದ ಹಾಗೂ ಕನ್ನಡಿಗರ ವಿರೋಧಿ. ಈ ಹಿಂದೆ ರೆಡ್ಡಿ, ಜೊಲ್ಲೆ, ಮುರುಗೇಶ್ ನಿರಾಣಿ ವಿರುದ್ಧ ಅನುಮತಿ ಕೋರಿದ್ದರು. ಪ್ರಾಸಿಕ್ಯೂಷನ್ ಗೆ ಲೋಕಾಯುಕ್ತ ಮತ್ತು ಎಸಿಬಿ ಅನುಮತಿ ಕೋರಿತ್ತು. ಆಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲೇ ಇಲ್ಲ ಎಂದು ಅವರು ತಿಳಿಸಿದರು.
ಈಗ ಯಾವುದೋ ಖಾಸಗಿ ವ್ಯಕ್ತಿಯಿಂದ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ.ದೂರು ನೀಡಿದ ತಕ್ಷಣ ಅನುಮತಿ ನೀಡಲು ಮುಂದಾಗುತ್ತಿದ್ದಾರೆ.ಎಲ್ಲಿಂದಲೋ ಬಂದು ಇಲ್ಲಿ ದಬ್ಬಾಳಿಕೆ ಮಾಡಿದರೆ. ನಾವು ಒಪ್ಪಲ್ಲ. ರಾಜ್ಯಪಾಲರು ಸರ್ಕಾರವನ್ನು ಬೀಳಿಸುವ ಹುನ್ನಾರ ಮಾಡಿದ್ದಾರೆ ಎಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದಾಸನಪುರ ಗ್ರಾಮದಲ್ಲಿ ಕಂದಾಯ ಸಚಿವ ಕೃಷ್ಣಭೇರೇಗೌಡ ವಾಗ್ದಾಳಿ ನಡೆಸಿದರು.