ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ನಾನೇ ಅಭ್ಯರ್ಥಿ ಎಂಬುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದರು. ಆದ್ರೇ ಬಿಜೆಪಿಯ ಕೆಲವರು ಈ ಕ್ಷೇತ್ರದಿಂದ ಕಣಕ್ಕೆ ಇಳಿಡೋದಾಗಿ ಹೇಳಲಾಗುತ್ತಿತ್ತು. ಆದ್ರೇ ಆ ಊಹಾಪೋಹಗಳಿಗೆ ತೆರೆ ಎಳೆದಂತೆ ನಾನು ಲೋಕಸಭಾ ಚುನಾವಣೆಗೆ ನಿಲ್ಲೋದಿಲ್ಲ. ಜೋಶಿಯೇ ಅಭ್ಯರ್ಥಿ ಎಂಬುದಾಗಿ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸ್ಪಷ್ಟ ಪಡಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನನಗೆ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಹಲವರು ಸಲಹೆ ನೀಡಿದ್ದಾರೆ. ಆದ್ರೇ ನಾನು ಬಿಜೆಪಿ ಬಿಟ್ಟು ಹೋಗೋದಿಲಲ್. ನಾನು ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ ಅಂತ ಹೇಳಿದರು.
ಬಿಜೆಪಿ ನಾಯಕರಾದ ಜೆ.ಪಿ. ನಡ್ಡಾ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಹಾಗೂ ಪ್ರಹ್ಲಾದ ಜೋಶಿ ಅವರು ಜಗದೀಶ ಶೆಟ್ಟರ ಅವರನ್ನು ಕರೆತಂದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಶೆಟ್ಟರ, ಬಿಜೆಪಿಗೆ ವಾಪಸಾಗಿರುವುದರಿಂದ ಪಕ್ಷಕ್ಕೆ ಇನ್ನಷ್ಟು ಬಲ ಬಂದಂತಾಗಿದೆ ಎಂದು ತಿಳಿಸಿದರು.
ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು: ಸಿದ್ಧರಾಮಯ್ಯ ವಿರುದ್ಧ ‘HDK ಕಿಡಿ’
BREAKING: 7 ದಿನಗಳಲ್ಲಿ ‘ದೇಶಾದ್ಯಂತ’ CAA ಜಾರಿ: ಕೇಂದ್ರ ಸಚಿವರಿಂದ ಮಹತ್ವದ ಘೋಷಣೆ