ನವದೆಹಲಿ : ದೆಹಲಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಬಿ.ಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ,
ಕೇಂದ್ರ ಕೃಷಿ ಸಚಿವರ ಜೊತೆ ಚರ್ಚಿಸಿ ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆಗೆ ಯಡಿಯೂರಪ್ಪ ಸೇರಿದಂತೆ ಶಿವಮೊಗ್ಗದಲ್ಲಿ ಬಿಜೆಪಿ ನಾಯಕರು ಜೋಶಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿಅಡಿಕೆಗೆ ತಗುಲಿರುವ ಎಲೆ ಚುಕ್ಕೆ ರೋಗದಿಂದ ರೈತರು ಆತಂಕದಲ್ಲಿದ್ದಾರೆ, ರೈತರಿಗೆ ಕೇಂದ್ರ ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕು ಎಂದು ಯಡಿಯೂರಪ್ಪ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.
BIG NEWS: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಸಿಐಡಿಯಿಂದ ಭರ್ಜರಿ ಕಾರ್ಯಾಚರಣೆ, 25 ಮಂದಿ ಅರೆಸ್ಟ್