ಶಿವಮೊಗ್ಗ: ಅನೇಕ ಪತ್ರಕರ್ತರು ಸುದ್ದಿಯ ಧಾವಂತದಲ್ಲಿ ತಮ್ಮ ವೈಯಕ್ತಿಕ ಬದುಕನ್ನೇ ಮರೆಯುತ್ತಾರೆ. ಆದರೇ ಅದು ಆಗಬಾರದು. ಸುದ್ದಿಯ ಧಾವಂತದಲ್ಲಿ ಯಾವತ್ತೂ ಪತ್ರಕರ್ತರು ವೈಯಕ್ತಿಕ ಬದುಕನ್ನು ಮರೆಯಬಾರದು ಎಂಬುದಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಕಿವಿಮಾತು ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಸಾಗರ ತಾಲ್ಲೂಕು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದಂತ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿ ಮಾತನಾಡುತ್ತಾ, ಬಹುತೇಕ ಪತ್ರಕರ್ತರು ಸವಾಲುಗಳ ಜೊತೆಗೆ ಬದುಕುತ್ತಿದ್ದಾರೆ. ಅವರ ಬದುಕು ಹೂವಿನ ಹಾಸಿಗೆಯಾಗಿಲ್ಲ ಅಂತ ಹೇಳಿದರು.
ನಾನು ಪತ್ರಕರ್ತರ ಪರವಾಗಿ ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡುತ್ತೇನೆ. ಅವರಿಗೆ ಉಚಿತ ಸಾರಿಗೆ ಬಸ್ ಪಾಸ್, ಆರೋಗ್ಯ ವಿಮೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಡುವ ಕೆಲಸವನ್ನು ಸರ್ಕಾರದ ಮಟ್ಟದಲ್ಲಿ ನಿಂತು ನಿಮ್ಮ ಪರವಾಗಿ ಮಾಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರಸ್ತುತದ ವೇಳೆಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳ ಪಾತ್ರ ಕುರಿತಂತೆ ಹಿರಿಯ ನ್ಯಾಯವಾದಿ ಎಂ.ರಾಘವೇಂದ್ರ ಅವರು ಉಪನ್ಯಾಸ ನೀಡಿದರು. ಮಾಧ್ಯಮಗಳು ಆಳುವ ವರ್ಗಗಳ ಕೈಗೊಂಬೆಯಾಗಿರುವುದು ತಪ್ಪಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜೀವಂತವಾಗಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಕೆಲಸ ಮಾಡಬೇಕು ಎಂದು ಹೇಳಿದರು.
ದೃಶ್ಯಮಾದ್ಯಮಗಳು ತಮ್ಮ ಅಭಿಪ್ರಾಯವನ್ನು ಜನರ ಮೇಲೆ ಏರುವ ಕೆಲಸ ಮಾಡಿದ್ದವು. ಈಗ ಸಾಮಾಜಿಕ ಮಾಧ್ಯಮಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ವೇದಿಕೆಗಳಾಗಿದ್ದಾವೆ. ಪತ್ರಿಕೆಗಳನ್ನು ಓದುವವರ ಸಂಖ್ಯೆ ಕಡಿಮೆಯಾಗಿದೆ. ಸೋಷಿಯಲ್ ಮೀಡಿಯಾ ಬಳಕೆ ಹೆಚ್ಚಾಗುತ್ತಿದೆ ಎಂಬುದಾಗಿ ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ ಶಿವಕುಮಾರ್ ಅವರು ಮಾತನಾಡಿ, ಪತ್ರಕರ್ತರಿಗೆ ನಿವೇಶನ ನೀಡುವುದು, ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವುದು. ಆರೋಗ್ಯ ವಿಮೆ ಸೌಲಭ್ಯವನ್ನು ಜಾರಿಗೊಳಿಸುವಂತ ಕೆಲಸವಾಗಬೇಕಿದೆ. ಆ ನಿಟ್ಟಿನಲ್ಲಿ ಚುನಾಯಿತ ಪ್ರತಿನಿಧಿಗಳು ಪತ್ರಕರ್ತರ ಪರವಾಗಿ ಸರ್ಕಾರದ ಮಟ್ಟದಲ್ಲಿ ಗಮನ ಹರಿಸಬೇಕು ಎಂಬುದಾಗಿ ತಿಳಿಸಿದರು.
ಈ ಕಾರ್ಯಕ್ರಮದ ವೇಳೆಯಲ್ಲೇ ಹಿರಿಯ ಪತ್ರಕರ್ತರಾದ ಲೋಕೇಶ ಕುಮಾರ್ ಆರ್. ಜಗನ್ನಾಥ್ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪ್ರಶಸ್ತಿ ಪುರಸ್ಕೃತ ಮಹೇಶ ಹೆಗಡೆ ಅವರನ್ನು ಅಭಿನಂದಿಸಲಾಯಿತು. ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿಹೆಚ್ಚು ಅಂಕ ಪಡೆದ ಸವಿ ಪ್ರಸಾದ್ ಅವರಿಗೆ ಅವರನ್ನು ಪುರಸ್ಕರಿಸಲಾಯಿತು.
ಇಂದಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ಶಾಖೆಯಿಂದ ಆಚರಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಅಧ್ಯಕ್ಷತೆಯನ್ನು ತಾಲ್ಲೂಕು ಅಧ್ಯಕ್ಷ ಜಿ.ನಾಗೇಶ್ ಅಧ್ಯಕ್ಷತೆ ವಹಿಸಿದ್ದರು. ಉಪ ವಿಭಾಗಾಧಿಕಾರಿ ಯತೀಶ್ ಆರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಪರಮೇಶ್ವರಪ್ಪ, ನಗರಸಭೆ ಸದಸ್ಯ ಶ್ರೀನಿವಾಸ್ ಮೇಸ್ತ್ರಿ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಮಾ.ವೆಂ.ಸ.ಪ್ರಸಾದ್ ಸ್ವಾಗತಿಸಿದರೇ, ಮಹೇಶ ಹೆಗಡೆ ಪ್ರಾಸ್ತಾವಿಕ ನುಡಿಯಾಡಿದರು, ದೀಪಕ್ ಸಾಗರ್ ನಿರೂಪಿಸಿದರೇ, ಎಂ.ಜಿ.ರಾಘವನ್ ವಂದಿಸಿದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ರಾಜ್ಯಸಭಾ ಸದಸ್ಯತ್ವಕ್ಕೆ ಸಂಸದೆ ಮಮತಾ ಮಹಾಂತ ರಾಜೀನಾಮೆ | Mamata Mahanta resigns
ಅ.2ರಿಂದ ‘SSLC ಪರೀಕ್ಷೆ-3’ ಆರಂಭ: ‘97,933 ವಿದ್ಯಾರ್ಥಿ’ಗಳು ನೋಂದಣಿ | SSLC Exam-3