ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಡಿಸೆಂಬರ್ 5 (ನಾಳೆ) ಮತ್ತು  6 ರಂದು ಮಹತ್ವದ ಸಭೆಯನ್ನು ಘೋಷಿಸಿದ್ದು, 2024 ರ ಸಾರ್ವತ್ರಿಕ ಚುನಾವಣೆಯ ಹಾದಿಯನ್ನು ನಿರ್ಧರಿಸಲು ಎಲ್ಲಾ ರಾಜ್ಯಗಳಿಂದ ಪಕ್ಷದ ಎಲ್ಲಾ ಪ್ರಮುಖ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ದೆಹಲಿಯಲ್ಲಿ ಮತ್ತೆ ಹದಗೆಟ್ಟ ವಾಯು ಗುಣಮಟ್ಟ: ನಿರ್ಮಾಣ, ನೆಲಸಮ ಚಟುವಟಿಕೆಗಳಿಗೆ ನಿಷೇಧ | Delhi Pollution

ಈ ಎರಡು ದಿನಗಳ ಸಭೆಯ ಅಧ್ಯಕ್ಷತೆಯನ್ನು ನಡ್ಡಾ ವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರದ ಸಮಾರೋಪ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ.

ಪಕ್ಷದ ಮೂಲಗಳ ಪ್ರಕಾರ, 2024 ರ ಲೋಕಸಭೆ ಚುನಾವಣೆ ಮತ್ತು 2023 ರ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಕಾರ್ಯತಂತ್ರ ಮತ್ತು ಸಿದ್ಧತೆಗಳ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ ಎನ್ನಲಾಗುತ್ತಿದೆ.

ಅಲ್ಲದೆ, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳು, ಎಲ್ಲಾ ರಾಜ್ಯಗಳ ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳು, ರಾಜ್ಯ ಅಧ್ಯಕ್ಷರು ಮತ್ತು ಎಲ್ಲಾ ರಾಜ್ಯಗಳ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಪುಟ್ಟಣ್ಣ ಕಣಗಾಲ್ – ಡಾ.ಮಹೇಶ ಜೋಶಿ ಬಣ್ಣನೆ

Share.
Exit mobile version