ಬೆಂಗಳೂರು: ಇಂದು ಸಂಜೆ ದೆಹಲಿಗೆ ತೆರಳುತ್ತಿದೆ. ಇದೇ ವೇಳೆ ಗಡಿ ವಿವಾದದ ಕುರಿತು ವಕೀಲರ ಜೊತೆ ಚರ್ಚಿಸುವ ಜೊತೆಗೆ ಸಮಯಾವಕಾಶ ಸಿಕ್ಕಲ್ಲಿ ರಾಜ್ಯ ರಾಜಕಾರಣದ ಕುರಿತು ಹೈಕಮಾಂಡ್ ನಾಯಕರ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
BIGG NEWS: ಶರಾವತಿ ಸಂತ್ರಸ್ತರ ಸಮಸ್ಯೆ ಮುಂದಿಟ್ಟು ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿಯಾಗುವ ಸಾಧ್ಯತೆ ಇದೆ. ಸಮಯ ಕೇಳಿದ್ದೇನೆ, ಅವರಿನ್ನೂ ಸಮಯ ಕೊಟ್ಟಿಲ್ಲ. ಅವರು ಸಮಯ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ನಡ್ಡಾ ನಂತರ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಭೇಟಿ ಮಾಡಬೇಕೆಂದುಕೊಂಡಿದ್ದೇನೆ ಎಂದರು.
ಸುಪ್ರೀಂ ಕೋರ್ಟ್ನಲ್ಲಿ ನವೆಂಬರ್ 30 ರಂದು ಗಡಿ ವಿವಾದ ಕುರಿತ ಪ್ರಕರಣದ ಅರ್ಜಿ ವಿಚಾರಣೆಗೆ ಬರಲಿದೆ. ಹಾಗಾಗಿ ಪ್ರಕರಣ ಕುರಿತು ನಮ್ಮ ಹಿರಿಯ ವಕೀಲ ಮುಕುಲ್ ರಹೊಟೊಗಿ ಅವರನ್ನು ಭೇಟಿಯಾಗುತ್ತೇನೆ. ರಾಜ್ಯದ ಮಾಹಿತಿ ನೀಡಿ ಚರ್ಚಿಸಲಾಗುತ್ತದೆ ಎಂದರು.