ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ನಿಗದಿತ ಸಮಯಕ್ಕಿಂತ ತಡವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.
ನಡ್ಡಾ ಇಂದು ಮಧ್ಯಾಹ್ನ 12:55 ಕ್ಕೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜನವರಿ 5 ಇಂದು ಮತ್ತು 6ರಂದು ಎರಡು ದಿನ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.5 ರಂದು ಮಧ್ಯಾಹ್ನ ತುಮಕೂರಿನಲ್ಲಿ, ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿರುವ ಅವರು, ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆಗಳಲ್ಲಿ ಭಾಗವಹಿಸಲಿದ್ದು, ಸಿದ್ದಗಂಗಾ ಮಠ ಸೇರಿದಂತೆ ಕೆಲವು ಪ್ರಮುಖ ಮಠಗಳಿಗೆ ಭೇಟಿ ನೀಡಲಿದ್ದಾರೆ.
ಜ.5ರಂದು ಮಧ್ಯಾಹ್ನ ತುಮಕೂರಿನ ತುಮಕೂರು ಮತ್ತು ಮಧುಗಿರಿ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಶಕ್ತಿ ಕೇಂದ್ರ ಸಭೆಯಲ್ಲಿ ನಡ್ಡಾ ಭಾಗವಹಿಸಲಿದ್ದು, ನಂತರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಂದು ಸಂಜೆ ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ, ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಪಕ್ಷದ ಎಸ್ಸಿ/ಎಸ್ಟಿ ಮತ್ತು ಒಬಿಸಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದು, ಮಾದರ ಚೆನ್ನಯ ಮತ್ತು ಸಿರಿಗೆರೆ ತರಳಬಾಳು ಮಠಕ್ಕೂ ಭೇಟಿ ನೀಡಲಿದ್ದಾರೆ.ಜ.5ರಂದು ಸಂಜೆ ನಡ್ಡಾ ಅವರು ದಾವಣಗೆರೆ ವಿಭಾಗದ ಬಿಜೆಪಿ ಸಂಸದರು, ಶಾಸಕರು, ಎಂಎಲ್ಸಿಗಳು ಮತ್ತು ಜಿಲ್ಲಾಧ್ಯಕ್ಷರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಜ.6ರಂದು ಹರಿಹರದ ಪಂಚಮಸಾಲಿ ಮಠ, ಕನಕ ಮತ್ತು ವಾಲ್ಮೀಕಿ ಗುರು ಪೀಠದ ಮಠಗಳಿಗೆ ಭೇಟಿ ನೀಡಲಿದ್ದಾರೆ. ನಂತರ ದಾವಣಗೆರೆಯಲ್ಲಿ ಬೂತ್ ಮಟ್ಟದ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ ತುಮಕೂರು ಜಿಲ್ಲೆಯ ಸಿರಾದಲ್ಲಿ ನಡ್ಡಾ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
BIGG NEWS : ಬೆಂಗಳೂರು ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ : ಬಿಎಂಟಿಸಿ ವಜ್ರ ಬಸ್ ದರ ಏರಿಕೆ
BREAKING NEWS : ವಿಧಾನಸೌಧದಲ್ಲಿ ಅನಧಿಕೃತ 10. 5 ಲಕ್ಷ ರೂ. ನಗದು ಹಣ ಪತ್ತೆ