ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ( PSI Recruitment Scam ) ಭಾಗಿಯಾಗಿ, ಸಿಐಡಿಯಿಂದ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಅಮಾನತುಗೊಂಡಿರುವಂತ ಎಡಿಜಿಪಿ ಅಮೃತ್ ಪಾಲ್ ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ, ಕೋರ್ಟ್ ಆದೇಶಿಸಿದೆ.
ಇಂದು ಎಡಿಜಿಪಿ ಅಮೃತ್ ಪಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿತ್ತು. ಈ ಹಿನ್ನಲೆಯಲ್ಲಿ, ಅವರನ್ನು ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
BREAKING NEWS: ರಾಜ್ಯ ಸರ್ಕಾರದಿಂದ ಮೂಲಭೂತ ಸೌಕರ್ಯ ಮರುಸ್ಥಾಪಿಸುವ ಕಾಮಗಾರಿಗೆ 500 ಕೋಟಿ ರೂ ಬಿಡುಗಡೆ
ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು, ಎಡಿಜಿಪಿ ಅಮೃತ್ ಪಾಲ್ ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶಿಸಿದ್ದಾರೆ. ಈ ಮೂಲಕ ಮತ್ತೆ ಅಮೃತ್ ಪಾಲ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ.