ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್‌ಲೈನ್ ಮೂಲಕವೂ ಪಾಲ್ಗೊಳ್ಳಬಹುದು.
ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ.
ಸಮೀಕ್ಷೆಯಲ್ಲಿ ಸಾರ್ವಜನಿಕರು ಈ ಕೆಳಕಂಡ QR Code ಅಥವಾ ಲಿಂಕ್ ನ್ನು ಉಪಯೋಗಿಸಿಕೊಂಡು ತಮ್ಮ ಮೊಬೈಲ್ ನಲ್ಲಿ ನಾಗರಿಕ ಲಾಗಿನ್ ಮೂಲಕ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಭಾಗವಹಿಸಲು ಕೋರಿದೆ.
https://kscbcselfdeclaration.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ, ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ. ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಲು ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ.
ಅವಶ್ಯವಿರುವ ದಾಖಲೆಗಳು:
1. UHID/MESCOM Account Number
3. ಚುನಾವಣಾ ಗುರುತಿನ ಚೀಟಿ ಸಂಖ್ಯೆ
2. ಪಡಿತರ ಚೀಟಿ ಸಂಖ್ಯೆ/ ಆಧಾರ್ ಸಂಖ್ಯೆ
ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್‌ಲೈನ್ ಮೂಲಕವೂ ಪಾಲ್ಗೊಳ್ಳಬಹುದು.https://t.co/AJEUMgb3HJ ವೆಬ್‌ಸೈಟ್‌ಗೆ ಭೇಟಿ ನೀಡಿ, ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ. ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಲು ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ… pic.twitter.com/AUCBzVP25M
— DIPR Karnataka (@KarnatakaVarthe) September 30, 2025