ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ((Karnataka High Court Chief Justice) ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ (NV Anjaria) ಪ್ರಮಾಣ ವಚನ ಸ್ವೀಕರಿಸಿದರು.
ಇನ್ಮುಂದೆ ಪೊಲೀಸರು ಆಸ್ತಿ, ಖರೀದಿ ಮಾರಾಟ ಮಾಡಲು ‘ಅನುಮತಿ’ ಕಡ್ಡಾಯ! ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!!
ಅಂದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಪಿ.ಎಸ್. ದಿನೇಶ್ ಕುಮಾರ್ ಅವರು ಫೆಬ್ರುವರಿ 24ಕ್ಕೆ ನಿವೃತ್ತರಾಗಿದ್ದಾರೆ. ನಿಲಯ್ ವಿ. ಅಂಜಾರಿಯಾ ಅವರು 2011 ರಿಂದ ಗುಜರಾತ್ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದಾರೆ.
3 ತಿಂಗಳಲ್ಲಿ ತಿದ್ದುಪಡಿಯಾದ ‘ದತ್ತಿ ಕಾಯಿದೆ’ ಅಂಗೀಕಾರ : ಡಿಕೆ ಶಿವಕುಮಾರ್
ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿ ಅಂಜಾರಿಯ ಅವರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ಮಾಜಿ ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯಿಲಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ.ಶಾಲಿನಿ ರಜನೀಶ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು, ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.