ಬೆಂಗಳೂರು: ಬಿಬಿಎಂಪಿ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದಲ್ಲಿ ಶ್ರೀನಿವಾಸ್ ಅವರ ಅಮಾನತಿನ ಬಳಿಕ, ಬೆಂಗಳೂರು ನಗರ ಜಿಲ್ಲಾಧಿಕಾರಿ ಹುದ್ದೆ ಖಾಲಿ ಉಳಿದಿತ್ತು. ಈ ಹುದ್ದೆಗೆ ಇದೀಗ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿ ಕೆ.ಎ ದಯಾನಂದ ಅವರನ್ನು ನೇಮಿಸಿ ಆದೇಶಿಸಿದೆ.
ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾಗಿದ್ದಂತ ಕೆ.ಎ ದಯಾನಂದ ಅವರನ್ನು, ಬೆಂಗಳೂರು ನಗರ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
‘ಕಿರಿಯ ಕವಯಿತ್ರಿ ಕು.ಅಮನ’ ಪ್ರಥಮ ಹಿಂದಿ ಕವನ ಸಂಕಲನ ಬಿಡುಗಡೆಗೊಳಿಸಿದ ‘ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್’
ಅಂದಹಾಗೇ ಕೆ.ಎ ದಯಾನಂದ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿ ಆಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಈ ಹಿಂದೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿಯೂ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದರು.
‘ಕುಂಬಾರರ ಸಂಘ’ದ ಕಚೇರಿಯಲ್ಲಿ ಎರಡು ಬಣಗಳ ನಡುವೆ ಗಲಾಟೆ: ‘2ನೇ ಮಹಡಿ’ಯಿಂದ ಬಿದ್ದು ವ್ಯಕ್ತಿ ಅಸ್ವಸ್ಥ
ಇದೀಗ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದಂತ ಅನುಭವ ಹೊಂದಿರುವಂತ ಐಎಎಸ್ ಅಧಿಕಾರಿ ಕೆ.ಎ ದಯಾನಂದ ಅವರನ್ನು, 2ನೇ ಬಾರಿಗೆ ರಾಜ್ಯ ಬಿಜೆಪಿ ಸರ್ಕಾರವು ಬೆಂಗಳೂರು ನಗರ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿ, ಆದೇಶಿಸಿದೆ.