ಬೆಂಗಳೂರು: ಕೆಇಎ ಸಿಇಟಿ ಪರೀಕ್ಷೆಯನ್ನು ಏಪ್ರಿಲ್.18 ಮತ್ತು 18, 2024ರಂದು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇಂದು ಕೆಇಎ ಪ್ರಕಟಿಸಿದೆ. ರಿಸಲ್ಟ್ ಹೇಗೆ ಚೆಕ್ ಮಾಡಬೇಕು ಅಂತ ಮುಂದೆ ಓದಿ.
ಈ ಸಂಬಂಧ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಏಪ್ರಿಲ್ ನಲ್ಲಿ ನಡೆದಿದ್ದಂತ ಕೆ-ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಇದು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://kea.kar.nic.in ನಲ್ಲಿ ಪ್ರಕಟಿಸಲಾಗಿದೆ ಅಂತ ತಿಳಿಸಿದೆ. ಕೆ-ಸಿಇಟಿ ಪರೀಕ್ಷೆ ಬರೆದಿದ್ದಂತ ವಿದ್ಯಾರ್ಥಿಗಳು ಫಲಿತಾಂಶವನ್ನು https://kea.kar.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ ಎಂದಿದೆ.
ಅಂದಹಾಗೇ 2024ರ ಕೆ-ಸಿಇಟಿ ಪರೀಕ್ಷೆಗೆ 3.27 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈಗ ದ್ವಿತೀಯ ಪಿಯುಸಿ ಹಾಗೂ ಕೃಷಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶದ ನಂತ್ರ, ಕೆಇಎಯಿಂದ ಇಂದು ಕೆ-ಸಿಇಟಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕೆಇಎ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶವನ್ನು ಪ್ರಕಟಿಸಿದೆ. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್ karresults.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಹೇಳಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶವನ್ನು ಪ್ರಕಟಿಸಿದೆ.
ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್ https://t.co/s4AwjLQrGU ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.@CMofKarnataka @drmcsudhakar #kcetresults— KEA (@KEA_karnataka) June 1, 2024
ಈ ರೀತಿ ರಿಸಲ್ಟ್ ಚೆಕ್ ಮಾಡಿ
ಕೆಇಎ ಪರೀಕ್ಷೆ ಬರೆದಿದ್ದಂತ ಅಭ್ಯರ್ಥಿಗಳು http://karresults.nic.in ಜಾಲತಾಣಕ್ಕೆ ಭೇಟಿ ನೀಡಬೇಕು. ಅಲ್ಲಿ ಕೇಳುವಂತ ಮಾಹಿತಿಯನ್ನು ಭರ್ತಿ ಮಾಡಿದ ನಂತ್ರ, ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಲೋಕಸಬಾ ಚುನಾವಣೆ ಮತ ಎಣಿಕೆ ಕುರಿತು ಪೂರ್ವಸಿದ್ದತಾ ಸಭೆ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್