ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆ.ಹನುಮಂತರಾಯಪ್ಪ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಈ ವೇಳೆ ಅಧ್ಯಕ್ಷ ಸ್ಥಾನಕ್ಕೆ ಕಾರಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿಲೀಪ್ ಕುಮಾರ್ ಮತ್ತು ದೇವನಹಳ್ಳಿ ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಕೆ.ಹನುಮಂತರಾಯಪ್ಪ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಪರಿಶೀಲನೆ ನಂತರ ಚುನಾವಣೆ ನಡೆಯಿತು. ಸಂಘದಲ್ಲಿ ಒಟ್ಟು 52 ಮತದಾರರಿದ್ದು, ಈ ಪೈಕಿ ದಿಲೀಪ್ ಕುಮಾರ್ 16 ಮತಗಳನ್ನು ಪಡೆದರೆ, ಕೆ.ಹನುಮಂತರಾಯಪ್ಪ 36 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಚುನಾವಣಾ ಅಧಿಕಾರಿಯಾದ ಡಾ. ನೆಲ್ಕುದ್ರಿ ಸದಾನಂದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕೆ.ಹನುಮಂತರಾಯಪ್ಪ ಅವರಿಗೆ ಪ್ರಮಾಣಪತ್ರ ವಿತರಿಸಿದರು.
ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕೆ.ಹನುಮಂತರಾಯಪ್ಪ ಮಾತನಾಡಿ, ತಮ್ಮನ್ನು ಅತೀ ಹೆಚ್ಚು ಮತಗಳಿಂದ ಆಯ್ಕೆ ಮಾಡಲು ಹಗಲಿರುಳು ಶ್ರಮಿಸಿದ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ನಿರ್ದೇಶಕರು, ಸರ್ಕಾರಿ ನೌಕರರು ಮತ್ತು ಪದಾಧಿಕಾರಿಗಳಿಗೆ ಸಲ್ಲಬೇಕು ಎಂದು ಕೃತಜ್ಞತೆ ಸಲ್ಲಿಸಿದರು.
ಈಗಾಗಲೇ 2013- 19 ವರೆಗೆ ದೇವನಹಳ್ಳಿ ತಾಲ್ಲೂಕು ಅಧ್ಯಕ್ಷರಾಗಿ, 2019- 24 ವರೆಗೆ ತಾಲೂಕು ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, 2024-29 ವರೆಗೆ ಗ್ರಾಮಾಂತರ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಿರಿ ಇಲ್ಲಿಯವರೆಗೂ ನೌಕರರ ಸಮಸ್ಯೆ ಹಾಗೂ ಸಂಘದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದು, ಮುಂದೆಯೂ ಇದೇ ರೀತಿ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರ ಶ್ರೇಯೋಭಿವೃದ್ಧಿಗೆ ಮತ್ತು ನೌಕರರ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಬಳಿಕ ಪದಾಧಿಕಾರಿಗಳು ಹಾಗೂ ನೌಕರರ ವರ್ಗ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ವರದಿ : ಗಿರೀಶ್ ರಾಜ್
‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಬೇಕಾದ ‘ಅಗತ್ಯ ದಾಖಲೆ’ಗಳಿವು
BREAKING: ನಾಳೆ ರಾಜ್ಯದಲ್ಲಿ ‘ಜಾತಿಗಣತಿ ಸಮೀಕ್ಷೆ’ ಮುಕ್ತಾಯ: ನ.10ರವರೆಗೆ ‘ಆನ್ ಲೈನ್’ನಲ್ಲಿ ವಿವರ ದಾಖಲಿಸಲು ಅವಕಾಶ








