ಮೈಸೂರು: ವಿಧಾನಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ ಮಂಜುನಾಥ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.
ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್.3ರಂದು ಮತದಾನ ನಡೆಯಲಿದೆ. ಈ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕೆ.ಕೆ ಮಂಜುನಾಥ್ ಕುಮಾರ್ ಗುರುವಾರದಂದು ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿದಂತ ಅವರು ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರೇ ಆಯ್ಕೆಯಾಗುವ ಮೂಲಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಕಳೆದ ಅವಧಿಯಲ್ಲಿ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜನಪ್ರತಿನಿಧಿಗಳು ಶಿಕ್ಷಕರ ಹಿತ ಕಾಯದೇ ಸ್ವಹಿತ ಮೆರೆದಿದ್ದಾರೆ. ಈ ಬಾರಿ ಕ್ಷೇತ್ರದ ಶಿಕ್ಷಕರು ನನ್ನನ್ನು ಚುನಾಯಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಚಿಕ್ಕಮಗಳೂರು ಶಾಸಕ ಡಿ.ಸಿ ತಮ್ಮಯ್ಯ, ಹೊನ್ನಾಳಿ ಶಾಸಕ ಶಾಂತಗೌಡ, ಎಂಎಲ್ಸಿ ಮಂಜುನಾಥ ಭಂಡಾರಿ, ಮಾಜಿ ಎಂಎಲ್ಸಿ ಪ್ರಸನ್ನ ಕುಮಾರ್ ಹಾಗೂ ಪಕ್ಷದ ಇತರೆ ಕಾರ್ಯಕರ್ತರು ಹಾಜರಿದ್ದರು.
BREAKING: ‘SSLC ವಿದ್ಯಾರ್ಥಿ’ಗಳಿಗೆ ‘ಗ್ರೇಸ್ ಮಾರ್ಕ್ಸ್’ ನೀಡುವ ನಿರ್ಧಾರ ಹಿಂಪಡೆದ ‘ರಾಜ್ಯ ಸರ್ಕಾರ’
‘SSLC ಪರೀಕ್ಷೆ-2’ಗೆ ನೋಂದಾಯಿಸಿರುವ ವಿದ್ಯಾರ್ಥಿಗಳೇ ಗಮನಿಸಿ : ಜೂ.05 ರವರೆಗೆ ‘ವಿಶೇಷ ತರಗತಿ’ ಆಯೋಜನೆ