ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಡಾ.ಕವಿತಾ ಯೋಗಪ್ಪನವರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದಂತ ಡಾ.ಕವಿತಾ ಯೋಗಪ್ಪನವರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಗೆ ಕೆ.ಮಾಯಣ್ಣಗೌಡ ಅವರನ್ನು ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ.
ಅಂದಹಾಗೆ ನೂತನ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಅವರು ಈ ಹಿಂದೆಯೂ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ಜೂನ್.8, 2024ರಂದು ವರ್ಗಾವಣೆ ಮಾಡಲಾಗಿತ್ತು. ಇದೀಗ ಒಂದು ವರ್ಷದ ಬಳಿಕ ಮತ್ತೆ ಕೆ.ಮಾಯಣ್ಣಗೌಡ ಅವರನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.
ಬಿಬಿಎಂಪಿಯಿಂದ ಈವರೆಗೆ 5 ಲಕ್ಷ ನಾಗರೀಕರಿಗೆ ‘ಅಂತಿಮ ಇ-ಖಾತಾ’ ವಿತರಣೆ | BBMP E-Khata
Watch Video: ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಪೋಟ | Kerala coast