ಬೆಂಗಳೂರು: ತೀವ್ರ ಕುತೂಹಲ, ದಿಢೀರ್ ಬೆಳವಣಿಗೆ ಎನ್ನುವಂತೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂತಹ ರಾಜೀನಾಮೆಯನ್ನು ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಿದ್ದರು. ಅವರು ರಾಜ್ಯಪಾಲರಿಗೆ ರವಾನಿಸಿದ್ದರು. ಇದೀಗ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಚಿವ ಕೆಎನ್ ರಾಜಣ್ಣ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಶೀಘ್ರವೇ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.
ದಿಢೀರ್ ಬೆಳವಣಿಗೆ ಎನ್ನುವಂತೆ ಕಾಂಗ್ರೆಸ್ ಹೈಕಮಾಂಡ್ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿತ್ತು. ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್ ರಾಜಣ್ಣ ನೀಡಿದ್ದಂತ ಹೇಳಿಕೆ ಹಿನ್ನಲೆಯಲ್ಲಿ ಈ ಸೂಚನೆ ನೀಡಲಾಗಿದೆ ಎನ್ನಲಾಗುತ್ತಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ವೇಳೆ ಮಾತನಾಡಿದಂತ ಕೆಎನ್ ರಾಜಣ್ಣ ಅವರು ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ತಾನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದರು.
ಕೆ.ಎನ್ ರಾಜಣ್ಣ ಸಲ್ಲಿಸಿದ್ದಂತ ಸಚಿವ ಸ್ಥಾನದ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿಕೊಟ್ಟಿದ್ದರು. ಇದೀಗ ಕೆ.ಎನ್ ರಾಜಣ್ಣ ಅವರು ಸಚಿವ ಸ್ಥಾನಕ್ಕೆ ನೀಡಿದ್ದಂತ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಗೆಜೆಟ್ ಅಧಿಸೂಚನೆಯನ್ನು ಕೂಡ ಹೊರಡಿಸುವ ಸಾಧ್ಯತೆ ಇದೆ.
ನಿಮ್ಮ ಹೆಸರಿನಲ್ಲಿ ಎಷ್ಟು ‘ಸಿಮ್ ಕಾರ್ಡ್’ ಬಳಕೆಯಲ್ಲಿವೆ ಅಂತ ತಿಳಿಯಲು ಜಸ್ಟ್ ಹೀಗೆ ಮಾಡಿ | Mobile Connections
BIG BREAKING: ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ | K.N.Rajanna resigns