ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿಯೇ ಮಾಜಿ ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಅವರು, ಬಿಜೆಪಿ ಪಕ್ಷವನ್ನು ತೊರೆದು, ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ವಿಶ್ವಕರ್ಮ ಸಮುದಾಯದ ಪ್ರಬಲ ಮುಖಂಡ ಕೆ ಪಿ ನಂಜುಂಡಿ ಅವರು ಬಿಜೆಪಿ ಮತ್ತು ವಿಧಾನ ಪರಿಷತ್ ಸ್ಥಾನ ತೊರೆದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ತಿನ ಸದಸ್ಯ ದಿನೇಶ್ ಗೂಳಿಗೌಡ, ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ಶ್ರೀಮತಿ ಸೌಮ್ಯ ರೆಡ್ಡಿ, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಮತ್ತು ಮಾಧ್ಯಮ ಕಾರ್ಯದರ್ಶಿ ದೀಪಕ್ ತಿಮ್ಮಯ ಉಪಸ್ಥಿತರಿದ್ದರು.
‘ನಾನು ಆ ರೀತಿ ಹೇಳಿಲ್ಲ’ : ಸಂಪತ್ತಿನ ಮರುಹಂಚಿಕೆ ವಿವಾದದ ಕುರಿತು ‘ರಾಹುಲ್ ಗಾಂಧಿ’ ಸ್ಪಷ್ಟನೆ
“ಪಾಶ್ಚಿಮಾತ್ಯ ಮಾಧ್ಯಮಗಳು ತಮ್ಮನ್ನು ಭಾರತದ ಚುನಾವಣೆಯ ಭಾಗವೆಂದು ಭಾವಿಸುತ್ವೆ” : ಜೈಶಂಕರ್ ತಿರುಗೇಟು