ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ.
ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುತ್ತದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಒಟ್ಟು 33 ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಯನ್ನು 1.36 ಲಕ್ಷ ಮಂದಿ ತೆಗೆದುಕೊಂಡಿದ್ದಾರೆ. 11 ಜಿಲ್ಲೆಗಳ (ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ) 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಅವರು ವಿವರಿಸಿದ್ದಾರೆ.
ಬೆಂಗಳೂರಿನಲ್ಲಿ ಎಲ್ಲ 33 ವಿಷಯಗಳ ಪರೀಕ್ಷೆ ನಡೆದರೆ, ಉಳಿದ ಜಿಲ್ಲೆಗಳಲ್ಲಿ 11 ವಿಷಯಗಳ ಪರೀಕ್ಷೆ ಗಳು ಮಾತ್ರ ನಡೆಯಲಿವೆ. ಈ ಪರೀಕ್ಷೆಗಳಿಗೆ ನೆಗೆಟಿವ್ ಮೌಲ್ಯಮಾಪನ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಪರೀಕ್ಷೆಗಳು ನಡೆಯಲಿದ್ದು, ಒಮ್ಮೆಗೇ ಎರಡೂ ಪತ್ರಿಕೆಗಳ (ಪತ್ರಿಕೆ 1 & 2) ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಮೂರು ಗಂಟೆ ಅವಧಿಯಲ್ಲಿ 100 ಅಂಕಗಳ ಸಾಮಾನ್ಯ ಜ್ಞಾನ ಮತ್ತು 200 ಅಂಕಗಳ ವಿಷಯವಾರು ಪತ್ರಿಕೆಗಳಿಗೆ ಉತ್ತರಿಸಬೇಕಾಗುತ್ತದೆ. ಎರಡೂ ಪತ್ರಿಕೆಗಳಿಗೆ ಪ್ರತ್ಯೇಕ ಓಎಂಆರ್ ನೀಡುತ್ತಿದ್ದು, ಆಯಾಯ ಓಎಂಆರ್ ನಲ್ಲೇ ಅದರ ಉತ್ತರಗಳನ್ನು ಎಚ್ಚರಿಕೆಯಿಂದ ದಾಖಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಈ ಹಿಂದಿನ ಎಲ್ಲ ಪರೀಕ್ಷೆಗಳ ಹಾಗೆಯೇ ಈ ಪರೀಕ್ಷೆಗೂ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳನ್ನು ಮುಖ ಚಹರೆ ಪತ್ತೆ ಮೂಲಕ ತೀವ್ರ ಶೋಧ ನಡೆಸಿಯೇ ಒಳ ಬಿಡಲಾಗುತ್ತದೆ. ಇದಕ್ಕೆ ಅಗತ್ಯ ಪೊಲೀಸ್ ಮತ್ತು ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ
ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ ಗಳನ್ನು ಅನುಮತಿ ಇರುವುದಿಲ್ಲ. ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಗಳನ್ನು ಧರಿಸುವುದು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ ,ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಪಾಕೇಟ್, ಪಾಕೇಟ್ಗುಳು, ದೊಡ್ಡ ಬಟನ್ಗತಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸಬಾರದು.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ಗುಳು ಅಥವಾ ಬಟನ್ಗಥಳು ಹೊಂದಿರುವ ಬಟ್ಟೆಗಳನ್ನು ಧರಿಸುವ ಆಗಿಲ್ಲ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ,ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಆಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯ. ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸಬಾರದು. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).
ನಿಷೇಧಿತ ವಸ್ತುಗಳ ಪಟ್ಟಿ
ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್ಗಅಳು, ಮೈಕ್ರೋಫೋನ್ಗೇಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ. ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸಿಬಾರದು. ಯಾವುದೇ ರೀತಿಯ ಮಾಸ್ಕನ್ನು ಧರಿಸುವಂತಿಲ್ಲ.
ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು. ಸರ್ಕಾರದಿಂದ ಮಾನ್ಯವಾದ ಪೆÇೀಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯ. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ. ಮೇಲಿನ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು.








