ಬೆಂಗಳೂರು: ರಾಜ್ಯದ ಅಣೆಕಟ್ಟೆಯಲ್ಲಿ ಒಂದಾಗಿರುವಂತ ಕಬಿನಿ ಅಣೆಕಟ್ಟೆ ಪುನಶ್ಚೇತನಕ್ಕೆ ಸರ್ಕಾರದಿಂದ 32.25 ಕೋಟಿ ಬಿಡುಗಡೆ ಮಾಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
1959ರಲ್ಲಿ ಕಬಿನಿ ಅಣೆಕಟ್ಟೆ ನಿರ್ಮಾಣ ಆರಂಭವಾಗಿ, 1974ರಲ್ಲಿ ಪೂರ್ಣಗೊಂಡಿತು. 51 ವರ್ಷವಾದ್ದರಿಂದ ಸುರಕ್ಷತೆ ದೃಷ್ಟಿಯಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಣೆಕಟ್ಟೆಯ ಪುನಶ್ಚೇತನಕ್ಕೆ ₹32.25 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
1959ರಲ್ಲಿ ಕಬಿನಿ ಅಣೆಕಟ್ಟೆ ನಿರ್ಮಾಣ ಆರಂಭವಾಗಿ, 1974ರಲ್ಲಿ ಪೂರ್ಣಗೊಂಡಿತು. 51 ವರ್ಷವಾದ್ದರಿಂದ ಸುರಕ್ಷತೆ ದೃಷ್ಟಿಯಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಣೆಕಟ್ಟೆಯ ಪುನಶ್ಚೇತನಕ್ಕೆ ₹32.25 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.#Kabini@CMofKarnataka… pic.twitter.com/eUE0i9rE5T
— DIPR Karnataka (@KarnatakaVarthe) July 21, 2025
ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅತೀ ಮತ್ಸರ ಪಡುತ್ತಿದ್ದಾರೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಒಮ್ಮೆಯೂ ಅಧಿಕಾರಕ್ಕೆ ಬಂದಿಲ್ಲ. ಪ್ರತೀ ಬಾರಿ ಹಿಂಬಗಿಲಿನಿಂದ ಅಧಿಕಾರ ಹಿಡಿಯುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ
ಜೆಡಿಎಸ್‌ನ ಕುಮಾರಸ್ವಾಮಿ ಸ್ವಂತ ಶಕ್ತಿ ಮೇಲೆ ಯಾವತ್ತೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ರಾಜ್ಯದ ಜನರ ಪ್ರೀತಿ, ವಿಶ್ವಾಸ, ಅಭಿಮಾನ ಉಳಿಸಿಕೊಳ್ಳದ ಇವರಿಗೆ ಇವರಿಗೆ ನಮ್ಮ ಸರ್ಕಾರದ ಬಗ್ಗೆ ಟೀಕಿಸುವ ನೈತಿಕತೆ ಇಲ್ಲ ಎಂದರು.
ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಪರವಾಗಿ ಇಲ್ಲ. ರಾಜ್ಯದ ಜನರ ಪರವಾಗಿ ಇಲ್ಲ. ಪ್ರತಿ ವರ್ಷ ನಾವು ರಾಜ್ಯದಿಂದ ಕೇಂದ್ರಕ್ಕೆ ಕೊಡುವ ತೆರಿಗೆಯಲ್ಲಿ ರಾಜ್ಯಕ್ಕೆ ಬರುತ್ತಿರುವುದು ಅತ್ಯಲ್ಪ. ರಾಜ್ಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಿ ಎಂದು ಮೋದಿಯವರಿಗೆ ಕೇಳುವ ಧೈರ್ಯ ಕೇಂದ್ರ ಸಚಿವ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಸೇರಿ ಸಂಸದರಾದ ಬೊಮ್ಮಾಯಿ ಸೇರಿ ಯಾರಿಗೂ ಇಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸೊಲ್ಲೆತ್ತದ ಬಿಜೆಪಿ-ಜೆಡಿಎಸ್ ರಾಜ್ಯದ ಜನಕ್ಕೆ ದ್ರೋಹ ಎಸಗಿದ್ದಾರೆ ಎಂದರು.