ಮಂಡ್ಯ :- ಕಡೇ ಕಾರ್ತಿಕ ಸೋಮವಾರದಂದು ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಪುರೋಹಿತ ಹಾಗೂ ವೇದ ಬ್ರಹ್ಮ ಡಾ.ರಾಘವೇಂದ್ರ ರಾವ್ ತಿಳಿಸಿದರು.
ನ.17 ರಂದು ಕಡೇ ಕಾರ್ತಿಕ ಸೋಮವಾರದ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗೆ 9 ಗಂಟೆಗೆ ಮಹಾರುದ್ರ ಹೋಮ, ಬೆಳಗ್ಗೆ 9. 30 ಗಂಟೆಗೆ ಕಾಶಿ ವಿಶ್ವನಾಥನಿಗೆ ಮಹಾ ರುದ್ರಾಭಿಷೇಕ, ವಿವಿಧ ಬಗೆಯ ಹಣ್ಣುಗಳಿಂದ ಹಾಗೂ ಪುಷ್ಪಗಳಿಂದ ವಿಶೇಷ ಅಲಂಕಾರ, ಮಧ್ಯಾಹ್ನ 12 ಗಂಟೆಗೆ ಕಾಶಿ ವಿಶ್ವನಾಥನಿಗೆ ವಿಶೇಷ ಅಲಂಕಾರದೊಂದಿಗೆ ಮಹಾ ಮಂಗಳಾರತಿ ಹಾಗೂ ದೇವರ ದರ್ಶನಕ್ಕೆ ಬರುವ ಸದ್ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಜೆ 6 ಗಂಟೆಗೆ ಶಿವ ಪಾರ್ವತಿ ಉತ್ಸವ ಸಹಿತ, ಕಾರ್ತಿಕ ದೀಪೋತ್ಸವವನ್ನು ಏರ್ಪಡಿಸಲಾಗಿದೆ ನಂತರ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಗುವುದು. ಕಾಶಿ ವಿಶ್ವನಾಥನ ದರ್ಶನಕ್ಕೆ ತಾಲೂಕು ಹಾಗೂ ಜಿಲ್ಲೆಯಿಂದ ಹೆಚ್ಚಿನ ಭಕ್ತಾದಿಗಳು ಆಗಮಿಸಿ ಭಕ್ತವಂತನ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಶ್ರೀ ಶಂಕರ ಮಹಾಸಭಾ ಅಧ್ಯಕ್ಷರಾದ ಗುರುಸ್ವಾಮಿ ಸೇರಿದಂತೆ ಇತರರು ಇದ್ದರು.








