ಚಿತ್ರದುರ್ಗ: ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಕಾಡುಗೊಲ್ಲ ಮುಖಂಡರು ಸಿಡಿದೆದ್ದಿದ್ದಾರೆ. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಇಂದು ಡಿಸಿ ಕಚೇರಿ ಮುಂದೆ ಸಾಂಕೇತಿಕ ಧರಣಿ, ಪ್ರತಿಭಟನೆಯನ್ನು ನಡೆಸಲಿದ್ದಾರೆ.
ಈ ಕುರಿತಂತೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಸಿ.ಶಿವು ಯಾದವ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಜನಾಂಗದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದಿನಾಂಕ 09-08-2024ರ ಇಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಒಂದು ದಿನದ ಸಾಂಕೇತಿಕ ಧರಣಿಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ, ಕೇಂದ್ರ ಸರ್ಕಾರಕ್ಕೆ ಕಾಡುಗೊಲ್ಲ ಜನಾಂಗದ ಜಾತಿ ಪ್ರಮಾಣಪತ್ರ ನೀಡುವಂತೆ ಮನವಿ ಪತ್ರವನ್ನು ನೀಡಿ ಒತ್ತಾಯಿಸಲಾಗುತ್ತದೆ. ಅಲ್ಲದೇ ಅಲೆಮಾರಿ ಪಟ್ಟಿಗೆ ಸೇರಿಸಬೇಕು. ಈ ತಕ್ಷಣವೇ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡುವಂತೆ ಆಗ್ರಹಿಸಲಾಗುವುದು ಎಂದಿದ್ದಾರೆ.
ಇನ್ನೂ ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಕಾಡುಗೊಲ್ಲರ ಹಟ್ಟಿಗಳಲ್ಲಿ ಸರ್ಕಾರದ ವತಿಯಿಂದ ಜಾಗೃತಿ ಕಾರ್ಯಕ್ರಮ ಏರ್ಪಡಿಸುವಂತೆ ಮನವಿ ಮಾಡಲಾಗುತ್ತದೆ. ಅಲೆಮಾರಿಗಳಿಗೆ ವಸತಿ ಯೋಜನೆಯ ಹಣವನ್ನು 1.20 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವಂತೆ ಆಗ್ರಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದಷ್ಟೇ ಅಲ್ಲದೇ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇನ್ನೂ ಹೆಚ್ಚಿನ ಕಾಲಾವಕಾಶವನ್ನು ಅರ್ಜಿ ಸಲ್ಲಿಸಲು ನೀಡಬೇಕು. ಕಾಡುಗೊಲ್ಲ ಜನಾಂಗವನ್ನು ಎಸ್ ಟಿ ಸೇರ್ಪಡೆ ಆಗುವವರೆಗೂ ವರ್ಗ-1ರ ಅಡಿಯಲ್ಲಿನ ಮೀಸಲಾತಿ ಲಭ್ಯವಾಗುವಂತೆ ಸ್ಪಷ್ಟ ಆದೇಶ ಹೊರಡಿಸುವಂತೆಯೂ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ, ಕೇಂದ್ರ ಸರ್ಕಾರಕ್ಕೆ ಕಾಡುಗೊಲ್ಲರ ಮುಖಂಡರು ಮನವಿ ಪತ್ರವನ್ನು ಸಲ್ಲಿಸಲಾಗುತ್ತದೆ ಎಂದರು.
ಇಂದು ಕಾಡುಗೊಲ್ಲ ಸಮುದಾಯದ ಎಲ್ಲಾ ಜನಪ್ರತಿನಿಧಿಗಳು, ಮುಖಂಡರು, ಜನಾಂಗದ ಬಂಧುಗಳು ಭಾಗಿಯಾಗಿ, ಒಂದು ದಿನದ ಸಾಂಕೇತಿಕ ಧರಣಿ, ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಸಿ.ಶಿವು ಯಾದವ್ ಮನವಿ ಮಾಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
RBI ನಿಂದ ಮಹತ್ವದ ತೀರ್ಮಾನ: ಈಗ ನಿಮ್ಮ ಚೆಕ್ ಅನ್ನು ಶೀಘ್ರದಲ್ಲೇ ಬ್ಯಾಂಕಿನಿಂದ ಕ್ಲೀಯರ್…!
ಬೆಂಗಳೂರಲ್ಲಿ ಲಾರಿ ಚಾಲಕರ ಡಿಎಲ್ ಪರಿಶೀಲಿಸಲು ‘RTO’ಗಳಿಗೆ ಸೂಚಿಸಿ: ಸಿಎಂಗೆ ‘ರಮೇಶ್ ಬಾಬು’ ಪತ್ರ
BREAKING: ಆ.27ರಂದು ‘KAS ಪೂರ್ವಭಾವಿ ಪರೀಕ್ಷೆ’ ಮರುನಿಗದಿ | KAS Recuitment Exam