ಶಿವಮೊಗ್ಗ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಅವರ ಪುತ್ರಿ ಡಾ. ರಾಜನಂದಿನಿ ಕಾಂಗ್ರೆಸ್ ನಿಂದ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಅವರ ಪುತ್ರಿ ಡಾ. ರಾಜನಂದಿನಿ ಇಂದು ಅರ್ಜಿ ಸಲ್ಲಿಸಿದ್ದಾರೆ.
ಇಬ್ಬರಲ್ಲಿ ಒಬ್ಬರಿಗಾದರೂ ಸಿಗಲಿ ಎಂಬ ಉದ್ದೇಶಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಪುತ್ರಿ ಕಾಂಗ್ರೆಸ್ ಪಕ್ಷದ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.ಕಾಗೋಡು ತಿಮ್ಮಪ್ಪ ಅವರ ನಡೆಯಿಂದ ಹಲವು ಆಕಾಂಕ್ಷಿಗಳಲ್ಲಿ ಗೊಂದಲ ಉಂಟು ಮಾಡಿದೆ. ಇನ್ನೂ ಕಾಂಗ್ರೆಸ್ ನಲ್ಲಿ ಯಾರಿಗೆ ಟಿಕೆಟ್ ಲಭ್ಯವಾಗಲಿದೆ ಎಂಬ ಕುತೂಹಲ ಮೂಡಿದೆ.
ಕಾಗೋಡು ತಿಮ್ಮಪ್ಪ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಒಬ್ಬ ಹಿರಿಯ ರಾಜಕಾರಣಿ. ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮೂಲದವರು. ಹಲವು ಬಾರಿ ಶಾಸಕರಾಗಿ, ಸಚಿವರಾಗಿ ಮತ್ತು ವಿಧಾನಸಭಾಧ್ಯಕ್ಷರೂ ಆಗಿ ಕಾರ್ಯ ನಿರ್ವಹಿಸಿದ್ದಾರೆ.
BIGG NEWS : ‘ಬಹಿರಂಗ ಹೇಳಿಕೆ’ ನೀಡದಂತೆ ಪ್ರತಾಪ್ ಸಿಂಹ, ರಾಮದಾಸ್ ಗೆ ‘ನಳೀನ್ ಕುಮಾರ್ ಕಟೀಲ್’ ಖಡಕ್ ವಾರ್ನಿಂಗ್
ಬಿಟಿಎಸ್-25: ಇನ್ಫಿ, ಇಂಟೆಲ್ಗೆ ‘ಕರ್ನಾಟಕ ಐಟಿ ರತ್ನ’ ಪ್ರಶಸ್ತಿ ಪ್ರದಾನ