ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಹೈಕೋರ್ಟ್ ಬಿಗ್ ಶಾರ್ ನೀಡಿದೆ. ಪ್ರಕರಣ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದೆ.
ಇಂದು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರನ್ನ ಅವರನ್ನೊಳಗೊಂಡ ನ್ಯಾಯಪೀಠವು ಕೈ ಮುಖಂಡ ರಾಜೀವ್ ಗೌಡ ಅವರು ಬೆದರಿಕೆ ಪ್ರಕರಣದ ಎಫ್ಐಆರ್ ರದ್ದು ಕೋರಿದ್ದಂತ ಅರ್ಜಿಯ ವಿಚಾರಣೆ ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಪೀಠವು ಕೇಸ್ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಇನ್ನೂ ಮಧ್ಯಂತರ ಜಾಮೀನು, ರಕ್ಷಣೆ ಕೋರಿದ್ದಂತ ಅರ್ಜಿಯ ಬಗ್ಗೆ ಯಾವುದೇ ಆದೇಶ ಮಾಡದೇ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ರಾಜೀವ್ ಗೌಡಗೆ ಬಿಗ್ ಶಾಕ್ ನೀಡಿದೆ.








