ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅಶ್ಲೀಲವಾಗಿ ನಿಂದಿಸಿ, ಧಮ್ಕಿ ಹಾಕಿದ ಪ್ರಕರಣದಲ್ಲಿ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ.
ಈ ಕುರಿತಂತೆ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮೀ ಚೌಧರಿ ಅವರು ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಘಟನೆಯ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಂಡು ವರದಿ ನೀಡಲು ಸೂಚನೆ ನೀಡಲಾಗಿದೆ.
ಶಿಡ್ಲಘಟ್ಟ ನಗರಸಭೆ ಆಯುಕ್ತರಿಗೆ ಬೆದರಿಕೆ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪೊಲೀಸರಿಗೆ ದೂರು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬ್ಯಾನರ್ ತೆರವುಗೊಳಿಸೋ ವಿಚಾರಕ್ಕಾಗಿ ಕಾಂಗ್ರೆಸ್ ಮುಖಂಡರೊಬ್ಬರು ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದರು. ಈ ಆಡಿಯೋ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಪೊಲೀಸರಿಗೆ ದೂರು ನೀಡಿದ್ದಾರೆ.
ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಕೈ ಮುಖಂಡ ಬೆದರಿಕೆ ವಿಚಾರವಾಗಿ ರಾಜೀವ್ ಗೌಡ ವಿರುದ್ಧ ನಗರಸಭೆ ಆಯುಕ್ತೆ ಅಮೃತಾಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ರಾಜೀವ್ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ. ಈ ಘಟನೆಯಿಂದ ನನಗೆ ಮಾನಸಿಕವಾಗಿ ತೀವ್ರ ಆಘಾತವಾಗಿದೆ. ಆತ್ಮಸ್ಥೈರ್ಯ ಕುಂದಿಸಿದ್ದಾರೆ. ಕೇಂದ್ರಸ್ಥಾನದಲ್ಲಿ ಒಬ್ಬಳೇ ವಾಸವಿದ್ದೇನೆ. ಸೂಕ್ತ ರಕ್ಷಣೆ ನೀಡುವಂತೆಯೂ ದೂರಿನಲ್ಲಿ ಕೋರಿದ್ದಾರೆ.
ಬೆಂಗಳೂರಿನ ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಮಹತ್ವದ ಮಾಹಿತಿ: ನವೀಕರಣಕ್ಕೆ ಈ ದಾಖಲೆ ಸಲ್ಲಿಕೆ ಕಡ್ಡಾಯ
ಶಿವಮೊಗ್ಗ: ಸಾಗರದ ಉಳ್ಳೂರಲ್ಲಿ ಅಕ್ರಮವಾಗಿ ‘ಮರ ಕಡಿತಲೆ’ ಮಾಡಿದವರ ವಿರುದ್ಧ ಕೇಸ್ ದಾಖಲು








