ಮಂಡ್ಯ: ಕೆರಗೋಡು ಗ್ರಾಮದ ಧ್ವಜ ವಿವಾದದ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸಿ.ಟಿ.ರವಿ ಮಾತನಾಡುವಾಗ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಮಳವಳ್ಳಿ ಕಾಂಗ್ರೆಸ್ ಶಾಸಕ ಪಿ.ಎಂ ನರೇಂದ್ರಸ್ವಾಮಿ ಆರೋಪಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ದೂರು ಸಲ್ಲಿಸಿದ್ದಾರೆ.
ಇದೇ ವೇಳೆ ಅವರು ದೂರಿನಲ್ಲಿ ಮಂಡ್ಯ ತಾಲೂಕು ಕೆರಗೋಡು ಗ್ರಾಮದಲ್ಲಿ ಜಿಲ್ಲಾಡಳಿತ ಹಾರಿಸಿರುವ ರಾಷ್ಟ್ರಧ್ವಜಕ್ಕೆ ಅಗೌರವ ತೋರುವ ರೀತಿಯಲ್ಲಿ ಸಿ ಟಿ ರವಿ ಮಾತನಾಡಿದ್ದಾರೆ. ಇದರಿಂದ ರಾಷ್ಟ್ರ ಮತ್ತು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಇವರ ವಿರುದ್ಧ ಸೆಕ್ಷನ್ 51A (a) ಅನ್ವಯ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಇನ್ನೂ ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ . ರಾಜ್ಯದಲ್ಲಿ ಎಂದಿಗೂ ಬಹುಮತದಿಂದ ಬಿಜೆಪಿ ಸರ್ಕಾರ ರಚಿಸಿಲ್ಲ, ಬದಲಾಗಿ ಆಪರೇಷನ್ ಕಮಲದ ಮೂಲಕ ಅಧಿಕಾರ ಚುಕ್ಕಾಣಿ ಹಿಡಿದಿದೆ ಅಂತ ತಿಳಿದು ಕೊಳ್ಳಬೇಕು ಅಂತ ಹೇಳಿದರು.
ಇನ್ನೂ ರಾಷ್ಟ್ರಧ್ವಜ ಬಗ್ಗೆ ಮಾತನಾಡಿರುವ ಬಿಜೆಪಿ ಪಕ್ಷದ ಸಿ.ಟಿ ರವಿಗೆ ಬುದ್ಧಿ ಭ್ರಮಣೆಯಾಗಿದೆ. ಸಂವಿಧಾನಬದ್ಧವಾಗಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆಂದು ಪ್ರಮಾಣವಚನ ಸ್ವೀಕರಿಸಿ ಸಚಿವರಾಗಿದ್ದ ಇವರು ಮಾನಸಿಕವಾಗಿ ವಿಚಲಿತರಾಗಿದ್ದಾರೆ ಎಂದು ಹೇಳಿದರು.