ಕೆಎನ್‌ಎನ್‌ಡಿಜಿಟಲ್‌ಡೆಸ್ಕ್: ಈ ಹಿಂದೆ ಬಿಡುಗಡೆಯಾಗಿದ್ದ ಟ್ರಾನ್ಸ್ ಸಾಂಗ್ ಮೂಲಕ ವ್ಯಾಪಕ ಕ್ರೇಜ್ ಸೃಷ್ಟಿಸಿದ್ದ ಚಿತ್ರ `ಕೈಲಾಸ ಕಾಸಿದ್ರೆ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ದೃಶ್ಯಗಳ ಮೂಲಕವೇ ಕಿಕ್ಕೇರಿಸೋ ಶೈಲಿಯ ಈ ಟ್ರಾನ್ಸ್ ವೀಡಿಯೋ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ನೋಡುಗರ ಕಡೆಯಿಂದ ಮೆಚ್ಚುಗೆಯನ್ನೂ ಪಡೆದುಕೊಳ್ಳುತ್ತಿದೆ.
ನಾಯಕ ರವಿ ಸೇರಿದಂತೆ ಒಂದಷ್ಟು ಪಾತ್ರಗಳ ಮಜಲುಗಳು ಈ ಮೂಲಕ ಪ್ರೇಕ್ಷಕರೆದುರು ತೆರೆದುಕೊಂಡಿವೆ. ದರಲ್ಲಿಯೂ ವಿಶೇಷವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಪಾತ್ರವಿಲ್ಲಿ ಪ್ರಧಾನವಾಗಿಯೇ ಸೆಳೆದಿದೆ. ಸೂರಜ್ ಒಂದಿಡೀ ಚಿತ್ರದ ತುಂಬಾ ಕ್ಯಾಟಿ ಆಗುವಂಥಾ ಹಾಸ್ಯ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನಿಗೆ ಸರಿ ಸಮನಾಗಿರುವ ಆ ಪಾತ್ರ ಕೂಡಾ ಈ ಟ್ರೈಲರ್ ನ ಹೈಲೈಟ್ ಗಳಲ್ಲೊಂದು ಆಗಿದೆ.
ರವಿ ಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ಕೈಲಾಸ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ ಸಾಹಿತ್ಯ, ವಿನೋದ್ ರಾಜೇಂದ್ರನ್ ಛಾಯಾಗ್ರಹಣ, ಧನಂಜಯ ಬಿ ನೃತ್ಯ ನಿರ್ದೇಶನವಿದೆ. ವಾಸಿಕ್ ಅಲ್ಸಾದ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಾಫ್ಟ್‍ವೇರ್ ಜಗತ್ತಿನಿಂದ ಆಗಮಿಸಿರುವ ನಾಗ್ ವೆಂಕಟ್ ಚೊಚ್ಚಲ ನಿರ್ದೇಶನದ ಚಿತ್ರವಿದು. ಅವರು ಮೊದಲ ಹೆಜ್ಜೆಯಲ್ಲಿಯೇ ಗಟ್ಟಿ ಕಥೆಯೊಂದಿಗೆ ಪ್ರೇಕ್ಷಕರನ್ನು ಮುಖಾಮುಖಿ ಆಗಲಿದ್ದಾರೆಂಬುದಕ್ಕೂ ಈ ಟ್ರೈಲರ್ ಸಾಕ್ಷಿಯಂತಿದೆ. ಈಗಾಗಲೇ ಕೈಲಾಸ ಕಾಸಿದ್ರೆ ಚಿತ್ರ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ತಲುಪಿಕೊಂಡಿದೆ. ಇದೇ ಮಾರ್ಚ್ 8ನೇ ತಾರೀಕಿನಂದು ಈ ಸಿನಿಮಾ ತೆರೆಗಾಣಲಿದೆ.