ಕಲಬುರ್ಗಿ : ಕಲಬುರ್ಗಿಯಲ್ಲಿ ಎಲ್‍ಪಿಜಿ ಸಿಲಿಂಡರ್ ಸ್ಫೋಟದಿಂದ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಚಿಂಚೋಳಿ ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನಡೆದಿದೆ.
ನಾಗಮ್ಮ ಕಂಠಪ್ಪಾ ಪೂಜಾರಿ ಎಂಬವರ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪರದಾರ ಮೂವತ್ತಕ್ಕೆ ಬಳ್ಳಿ ಗ್ರಾಮದಲ್ಲಿ 1 ಲಕ್ಷ ನಗದು, ಚಿನ್ನಾಭರಣ, ಬಟ್ಟೆ, ದವಸ, ಧಾನ್ಯ ಸೇರಿದಂತೆ ಎಲ್ಲ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ದೀಪಾವಳಿ ಹಬ್ಬದ ಸಂಭ್ರಮ ಸಂಭ್ರಮದಲ್ಲಿದ್ದ ನಾಗಮ್ಮ ಕುಟುಂಬಕ್ಕೆ ಶಾಕ್ ಆಗಿದೆ. ಘಟನೆ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.