ಕಲಬುರ್ಗಿ : ಗಾಯಗೊಂಡ ರೋಗಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ವೈದ್ಯನ ಮೇಲೆ ಕುಟುಂಬಸ್ಥರು ಹಲ್ಲೆ ನಡೆಸಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಹೌದು ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕು ಆಸ್ಪತ್ರೆಯಲ್ಲಿ ibಘಟನೆ ನಡೆದಿದೆ. ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ. ನಿನ್ನೆ ರಾತ್ರಿ ರೋಗಿಯ ಸಂಬಂಧೀಕರಿಂದ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ವ್ಯಕ್ತಿ ದಾಖಲಾಗಿದ್ದ. ವೈದ್ಯನ ಮೇಲೆ ಹಲ್ಲೆಯ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಯನ್ನು ಖಂಡಿಸಿ ಸೇಡಂ ತಾಲೂಕು ಆಸ್ಪತ್ರೆ ವೈದ್ಯರು ಸಿಬ್ಬಂದಿಯಿಂದ ಇದೀಗ ಪ್ರತಿಭಟನೆ ನಡೆಯಿಸಲಾಗುತ್ತಿದ್ದು, ಆರೋಪಿಗಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವೈದ್ಯರು ಆಗ್ರಹಿಸುತ್ತಿದ್ದಾರೆ.