ಕಲಬುರ್ಗಿ : ಆಸ್ಪತ್ರೆಯ ಮೇಲ್ಚಾವಣಿಯಲ್ಲಿ ನೀರು ತುಂಬಲು ತೆರಳಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಆಸ್ಪತ್ರೆಯ ಡಿ ಗ್ರೂಪ್ ನೌಕರರ ಒಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕಿನ ಕರಜಗಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಮೃತ ಸಿಬ್ಬಂದಿಯನ್ನು ಶಿವಪುತ್ರ (30) ಎಂದು ಹೇಳಲಾಗುತ್ತಿದೆ. ಶಿವಪುತ್ರ ಅಫ್ಜಲ್ ಪುರ ತಾಲೂಕಿನ ಮಾಶಾಳ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಎಂದಿನಂತೆ ಇಂದು ಕೂಡ ಆಸ್ಪತ್ರೆಯ ಮೇಲ್ಚಾವಣಿಯಲ್ಲಿ ನೀರು ತುಂಬಲು ಹೋದಾಗ ನೀರಿನ ಪೈಪ್ ವಿದ್ಯುತ್ ತಂತಿಗೆ ತಗುಲಿದೆ. ಹಾಗಾಗಿ ಶಿವಪುತ್ರ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದ್ದು ಘಟನೆ ಕುರಿತಂತೆ ಅಫ್ಜಲ್ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.