ಕಲಬುರ್ಗಿ : ಇತ್ತೀಚಿಗೆ ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಉಪಹಾರ ಸೇವಿಸಿ 17 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಇದರ ಬೆನ್ನಲ್ಲೇ ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಹೌದು ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿರುವ ಮಕ್ಕಳನ್ನು ಕೊಲ್ಲೂರಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಅಸ್ವಸ್ಥಗೊಂಡ ಕೆಲವು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವಾಡಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.ಮಧ್ಯಾಹ್ನ ಊಟದ ಬಳಿಕ ಮಕ್ಕಳಲ್ಲಿ ವಾಂತಿ ಮತ್ತು ತಲೆ ಸುತ್ತುವಿಕೆ ಕಂಡುಬಂದಿದೆ ಎನ್ನಲಾಗಿದ್ದು, ಶಾಲಾ ಆಡಳಿತದ ವಿರುದ್ಧ ಪೊಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಸತಿ ನೀಲಯದಲ್ಲೂ ಘಟನೆ
ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು. ಇದೀಗ ಕಲ್ಬುರ್ಗಿ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ನಡೆದಿದೆ.
ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆ ಉಪಹಾರ ಮಾಡಿದ್ದು, ನಂತರ ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.