ಕಲಬುರ್ಗಿ : ಸ್ನೇಹಿತರ ಜೊತೆಗೆ ಕೃಷಿ ಹೊಂಡಕ್ಕೆ ಈಜಲು ತೆರಳಿದ್ದ SSLC ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಫ್ಜಲ್ಪುರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಅಫ್ಜಲ್ಪುರದ ಮಹಾಂತೇಶ್ವರ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶ್ರೀಶೈಲ ನಿಲೆಗಾರ (16) ಶನಿವಾರ ಕೃಷಿ ಹೊಂಡದಲ್ಲಿ ಈಜಲು ಹೋಗಿ ಅವನು ಮೃತನಾಗಿದ್ದಾನೆ.
ಈ ವೇಳೆ ಡಬ್ಬಿಗೆ ಕಟ್ಟಿರುವ ಹಗ್ಗ ಹರಿದು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಶ್ರೀಶೈಲ ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆ ಬರೆದಿದ್ದ.ಬಾಲಕನ ತಂದೆ ಪಾನಿಪುರಿ ವ್ಯಾಪಾರ ಮಾಡುತ್ತಿದ್ದರು.