ಬೆಂಗಳೂರು:ನೈಋತ್ಯ ರೈಲ್ವೆಯು ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕಲಬುರಗಿಯಿಂದ ಯಶವಂತಪುರಕ್ಕೆ ವಿಶೇಷ ರೈಲು ಓಡಿಸಲಿದೆ.
ರೈಲು ಸಂಖ್ಯೆ 06506 ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಕಲಬುರಗಿಯಿಂದ ಹೊರಟು ಅದೇ ದಿನ ರಾತ್ರಿ 11 ಗಂಟೆಗೆ ಯಶವಂತಪುರ ತಲುಪಲಿದೆ.
ಈ ರೈಲು ಶಹಾಬಾದ್, ವಾಡಿ, ಯಾದಗಿರಿ, ರಾಯಚೂರು, ಮಂತ್ರಾಲಯಂ ರಸ್ತೆ, ಗುಂತಕಲ್, ಅನಂತಪುರ, ಧರ್ಮಾವರಂ, ಹಿಂದೂಪುರ ಮತ್ತು ಯಲಹಂಕದಲ್ಲಿ ನಿಲ್ಲಲಿದೆ. ಇದು ಸಾಮಾನ್ಯ ಸ್ಲೀಪರ್ ಕ್ಲಾಸ್ ಸೇರಿದಂತೆ 18 ಬೋಗಿಗಳನ್ನು ಹೊಂದಿರುತ್ತದೆ